ಪದವಿಪೂರ್ವ ಶಿಕ್ಷಣ ಇಲಾಖೆ 
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಸಾಧ್ಯತೆ

ಮೇ ತಿಂಗಳ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ...

ಬೆಂಗಳೂರು: ಮೇ ತಿಂಗಳ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಘೋಷಿಸಿದ್ದರೂ ಕೂಡ ಪದವಿಪೂರ್ವ ಕಾಲೇಜು ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಫಲಿತಾಂಶ ಪ್ರಕಟ ವಿಳಂಬವಾಗುವ ಸಾಧ್ಯತೆಯಿದೆ.

ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಈ ವರ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಒಟ್ಟು 20 ಸಾವಿರದ 500 ಮಂದಿ ಉಪನ್ಯಾಸಕನ್ನು ನೇಮಿಸಲಾಗಿತ್ತು. ಅವರಲ್ಲಿ 4 ಸಾವಿರ ಮಂದಿ ಪ್ರಾಂಶುಪಾಲರು ಮತ್ತು ಹಿರಿಯ ಬೋಧಕರು ಕೋಡಿಂಗ್ ಮತ್ತು ಡಿಕೋಡಿಂಗ್ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ.

ಮೌಲ್ಯಮಾಪನ ಕಾರ್ಯ ಮುಗಿಸಲು ಸುಮಾರು 10ರಿಂದ 12 ದಿನಗಳು ಬೇಕಾಗಬಹುದು. ಆದರೆ ಈ ಕಾರ್ಯಕ್ಕೆ ನಿಯೋಜನೆಗೊಂಡವರೆಲ್ಲ ಪ್ರತಿಭಟನೆ ನಡೆಸುತ್ತಿರುವುದರಿಂದ ಪರ್ಯಾಯ ವ್ಯವಸ್ಥೆಯಾಗಿ 7 ಸಾವಿರ ಮಂದಿ ಖಾಸಗಿ ಕಾಲೇಜು ಉಪನ್ಯಾಸಕರನ್ನು ಇಲಾಖೆ ನಿಯುಕ್ತಿಗೊಳಿಸಿದೆ.

''ಖಾಸಗಿ ಕಾಲೇಜು ಉಪನ್ಯಾಸಕರು ಮೌಲ್ಯಮಾಪನ ಮಾಡಬಹುದು. ಆದರೆ ಕೆಲಸ ಪೂರ್ಣಗೊಳಿಸಲು 25ರಿಂದ 30 ದಿನ ಬೇಕಾಗಬಹುದು'' ಎಂದು ಪರೀಕ್ಷಾ ವಿಭಾಗದ ಮಾಜಿ ಜಂಟಿ ನಿರ್ದೇಶಕರೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, 12 ದಿನಗಳಲ್ಲಿ 38 ಲಕ್ಷ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಮುಗಿಸುವುದು ಸಾಧ್ಯವಿಲ್ಲ ಎನ್ನುತ್ತಾರೆ.

ಮೌಲ್ಯಮಾಪನ ನಿಯಮದ ಪ್ರಕಾರ, ದಿನಕ್ಕೆ ಪ್ರತಿ ಉಪನ್ಯಾಸಕರಿಗೆ 24 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ನೀಡಲಾಗುತ್ತದೆ. ಅಷ್ಟು ಉತ್ತರ ಪತ್ರಿಕೆಗಳನ್ನು ಮುಗಿಸಿದರು ಕೂಡ ಎಲ್ಲಾ ಉತ್ತರ ಪತ್ರಿಕೆಗಳನ್ನು ಮುಗಿಸಲು 25 ದಿನಗಳು ಬೇಕಾಗಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!