ರಾಜ್ಯ

ಕಳಸಾ ಬಂಡೂರಿ ಯೋಜನೆ ಆಗ್ರಹಿಸಿ ಇಂದು ಕರ್ನಾಟಕ ಬಂದ್

Vishwanath S

ಬೆಂಗಳೂರು: ಕಳಸಾ ಬಂಡೂರಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

ಹನಿ ನೀರಿಗಾಗಿ ಉತ್ತರ ಕರ್ನಾಟಕ ಭಾಗದ ಜನರು ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೀರಿನ ವಿಚಾರದಲ್ಲಿ ರಾಜ್ಯ ಬಿಜೆಪಿ ಸಂಸದರು ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಗಡಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪ್ರೋ ಬಿಕೆರಾ ರಾವ್ ಬೈಂದೂರ್ ತಿಳಿಸಿದ್ದಾರೆ.

ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಕೇಂದ್ರ ಸರ್ಕಾರದ ಗಮನ ಸೆಳೆಯಲು ಹಾಗೂ ಜನಜಾಗೃತಿ ಉದ್ದೇಶದಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರು ಬಂದ್ ಆಚರಿಸಲಿದ್ದಾರೆ ಎಂದರು.

SCROLL FOR NEXT