ಸಾಂದರ್ಭಿಕ ಚಿತ್ರ 
ರಾಜ್ಯ

ಕ್ರೇನ್ ಕಂಬ ಹತ್ತಿ ಪ್ರತಿಭಟನೆ ನಡೆಸಿದ ನೌಕರರು: ಕೆಲಸ ಖಾಯಂಗೆ ಆಗ್ರಹ

ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರೆ ಹೆಚ್ಚು ಸುದ್ದಿಯಾಗುತ್ತಾರೆ. ಜಾತಿಯಾಧಾರಿತ ಮೀಸಲಾತಿ...

ಮಂಡ್ಯ: ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರೆ ಹೆಚ್ಚು ಸುದ್ದಿಯಾಗುತ್ತಾರೆ. ಜಾತಿಯಾಧಾರಿತ ಮೀಸಲಾತಿ ವಿರೋಧಿಸಿ ಇತ್ತೀಚೆಗೆ ವಿಜಯವಾಡದಲ್ಲೊಬ್ಬ ಎಂಜಿನಿಯರಿಂಗ್ ಪದವೀಧರ ಮೊಬೈಲ್ ಟವರ್  ಹತ್ತಿ ಪ್ರತಿಭಟನೆ ನಡೆಸಿದ್ದ. ನಂತರ ಅವನನ್ನು ಕೆಳಗಿಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಹೀಗೆ ಕೆಲವರು ಸರ್ಕಾರದ, ಅಧಿಕಾರಿಗಳ ಗಮನ ಸೆಳೆಯಲು ಬೇರೆ ಬೇರೆ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಾರೆ.

ಇಂದು ಮಂಡ್ಯದಲ್ಲಿ ಆಗಿದ್ದು ಇದೇ ರೀತಿ. ನೌಕರಿ ಖಾಯಂ ಮಾಡಲು ಆಗ್ರಹಿಸಿ ಕೈಯಲ್ಲಿ ವಿಷದ ಬಾಟಲಿ ಹಿಡಿದು ಕ್ರೇನ್ ಕಂಬ ಹತ್ತಿ ನಾಲ್ವರು ನೌಕರರು ಪ್ರತಿಭಟನೆ ನಡೆಸುತ್ತಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೆಎಂ ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ನಾಲ್ವರು ನೌಕರರು ಕ್ರೇನ್ ಕಂಬ ಹತ್ತಿ ಕುಳಿತು ಕೆಲಸ ಖಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮಗೆ ಖಾಯಂ ಕೆಲಸ ನೀಡಬೇಕೆಂದು ಆಗ್ರಹಿಸಿ ಕಳೆದ 2 ತಿಂಗಳಿನಿಂದ ನೌಕರರಾದ  ಸಂತೋಷ್, ಮಹಾದೇವು, ಮಹಾದೇವಸ್ವಾಮಿ, ಮಧು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದು ಗಮನ ಸೆಳೆಯುವ ಮಟ್ಟಕ್ಕೆ ತಲುಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದು, ನೌಕರರ ಮನವೊಲಿಸುವಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ