ಲೋಕಾಯುಕ್ತ 
ರಾಜ್ಯ

ಎಸಿಬಿ ಸ್ಥಾಪನೆಯಾಗುವವರೆಗೆ ಲೋಕಾಯುಕ್ತವೇ ಕ್ರಮ ಕೈಗೊಳ್ಳಲಿದೆ: ಸರ್ಕಾರ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವು ಸುಸಜ್ಜತವಾಗಿ ಸ್ಥಾಪನೆಯಾಗುವರೆಗೂ ಲೋಕಾಯುಕ್ತದಲ್ಲಿ ಬಾಕಿಯಿರುವ 1.640 ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರೇ ನೋಡಿಕೊಳ್ಳಲಿದ್ದಾರೆಂದು...

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವು ಸುಸಜ್ಜತವಾಗಿ ಸ್ಥಾಪನೆಯಾಗುವರೆಗೂ ಲೋಕಾಯುಕ್ತದಲ್ಲಿ ಬಾಕಿಯಿರುವ 1.640 ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರೇ ನೋಡಿಕೊಳ್ಳಲಿದ್ದಾರೆಂದು ರಾಜ್ಯ ಸರ್ಕಾರ ಹೈ ಕೋರ್ಟ್ ಗೆ ಸೋಮವಾರ ಮಾಹಿತಿ ನೀಡಿದೆ.

ಭ್ರಷ್ಟಾಚಾರ ಆರೋಪದಲ್ಲಿ ಮಂಡ್ಯವೈದ್ಯಕೀಯ ಕಾಲೇಜಿನ ಡಾ.ನಂದೀಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ನ್ಯಾವೇಣುಗೋಪಾಲ್ ಗೌಡ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಬಗ್ಗೆ ಮಾಹಿತಿ ನೀಡಿದೆ.

ಎಸಿಬಿ ಸ್ಥಾಪನೆಯಾಗುವರೆಗೂ ಲೋಕಾಯುಕ್ತದಲ್ಲಿ ಬಾಕಿಯಿರುವ 1.640 ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರೇ ನೋಡಿಕೊಳ್ಳಲಿದ್ದು, 700 ಲೋಕಾಯುಕ್ತ ಪೊಲೀಸರು ಕೆಲಸವಿಲ್ಲದೆ ಕೂರುವುದಿಲ್ಲ. ಬಾಕಿಯಿರುವ ಪ್ರಕರಣಗಳನ್ನು ನೋಡಿಕೊಳ್ಳಲಿದ್ದಾರೆಂದು ತಿಳಿಸಿದೆ.

ಈ ಬಗ್ಗೆ ಪರಿಶೀಲನೆ ನಡೆಸಿರುವ ನ್ಯಾಯಪೀಠ, ಲೋಕಾಯುಕ್ತ ಪೊಲೀಸ್ ನ್ನು ಹಿಂಪಡೆದಿರುವುದಾಗ ಈ ರೀತಿಯ ಆದೇಶ ಮಾಡಲು ಹೇಗೆ ಸಾಧ್ಯ ಎಂದು ಮೌಖಿಕವಾಗಿ ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ವಿಚಾರದಲ್ಲಿ ಅಲ್ಲೂ ಇಲ್ಲಾ ಇಲ್ಲೂ ಇಲ್ಲಾ ಎಂಬಂತೆ ಮಾಡಲಾಗುತ್ತಿದೆ. ಸಾರ್ವಜನಿಕರ ಭ್ರಷ್ಟಾಚಾರದ ಬಗ್ಗೆ ಎಲ್ಲಿ ದೂರು ನೀಡಬೇಕು ಎಂಬುದರ ಕುರಿತು ಸಾಕಷ್ಟು ಗೊಂದಲಗಳು ಸೃಷ್ಟಿಯಾಗುತ್ತಿವೆ ಎಂದು ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿತು.

ಎಸಿಬಿ ರಚನೆ ಮಾಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾಕಷ್ಟು ಅರ್ಜಿ ಸಲ್ಲಿಕೆಯಾಗಿದ್ದು, ಆರ್ಜಿಗಳ ವಿಚಾರಣೆನ್ನು ಹೈ ಕೋರ್ಟ್ ನ ವಿಭಾಗೀಯ ಪೀಠ ಏ.25 ರ ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್