ಸಾಂದರ್ಭಿಕ ಚಿತ್ರ 
ರಾಜ್ಯ

ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ದಂಪತಿಗಳ ನಡುವೆ ಜಗಳ: ಪತ್ನಿ ಆತ್ಮಹತ್ಯೆ

ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ಆರಂಭವಾದ ದಂಪತಿಗಳ ನಡುವಿನ ಜಗಳ ಕೊನೆಗೆ ಪತ್ನಿ ಆತ್ಮಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆಯೊಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

ಬೆಂಗಳೂರು: ಮಗುವಿಗೆ ಹಾಲು ಕುಡಿಸು ಎಂದಿದ್ದಕ್ಕೆ ಆರಂಭವಾದ ದಂಪತಿಗಳ ನಡುವಿನ ಜಗಳ ಕೊನೆಗೆ ಪತ್ನಿ ಆತ್ಮಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆಯೊಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕವಿತಾ ಅಲಿಯಾಸ್ ಆಯೆಷಾ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಭಾನುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದ ಅಯುಬ್ ಮಗು ಅಳುತ್ತಿರುವುದನ್ನು ನೋಡಿದ್ದಾನೆ. ಈ ವೇಳೆ ಮಗುವಿಗೆ ಹಾಲು ಕುಡಿಸಿ ಸಮಾಧಾನ ಪಡಿಸುವಂತೆ ಗದರಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ಆರಂಭವಾಗಿದೆ.

ನಂತರ ಮಗುವನ್ನು ಎತ್ತಿಕೊಂಡ ಅಯುಬ್ ಮನೆಯಿಂದ ಹೊರ ಹೋಗಿದ್ದಾನೆ. ಪತಿಯ ಮಾತಿನಿಂದ ನೊಂದಿದ್ದ ಅಯೆಷಾ ನಂತರ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ.

10 ನಿಮಿಷದ ನಂತರ ಅಯುಬ್ ಮನೆಗೆ ಬಂದಿದ್ದಾನೆ. ಈ ವೇಳೆ ಅಯೆಷಾಳನ್ನು ಕಂಡು ಗಾಬರಿಯಿಂದ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾನೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಆಯೆಷಾ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ