ರಾಜ್ಯ

ಬೆಂಗಳೂರಿನಲ್ಲಿ ಕಾರ್ಮಿಕರ ಗಲಭೆ ಪ್ರಕರಣ: 40 ಮಂದಿ ಬಂಧನ

Mainashree
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಹೊಸ ಭವಿಷ್ಯ ನಿಧಿ(ಪಿಎಫ್)ನೀತಿಯನ್ನು ಖಂಡಿಸಿ ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕಾರ್ಮಿಕರ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು 40 ಮಂದಿಯನ್ನು ಬಂಧಿಸಿದ್ದಾರೆ. 
ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾನಿ ಮಾಡಿದ ಆರೋಪದ ಮೇಲೆ ಈ 40 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರು, ಜಾಲಹಳ್ಳಿ, ಮೈಸೂರು ರಸ್ತೆ, ಹೊಸೂರು ರಸ್ತೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಸಾರ್ವಜನಿಕ ಆಸ್ತಿಗಳನ್ನು ಹಾನಿ ಮಾಡಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೆಘರಿಕ್ ತಿಳಿಸಿದ್ದಾರೆ. 
ಕೇಂದ್ರ ಪಿಎಫ್ ನೀತಿ ವಿರುದ್ಧ ಗಾರ್ಮೆಂಟ್ಸ್ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಗಲಭೆ ಮಾಡಿದ ಕೆಲವರನ್ನು ಗುರಿತಸಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಬಂಧಿತರು ಕಲ್ಲು ತೂರಾಟ ನಡೆಸಿದಲ್ಲದೇ, ಪೊಲೀಸ್ ವಾಹನಗಳನ್ನು ಹಾನಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
ಬಂಧಿತರ ಬಗ್ಗೆ ಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಈವರೆಗೆ ಗಲಭೆಗೆ ಸಂಬಂಧಿಸಿದಂತೆ 38 ಪ್ರಕರಣಗಳು ದಾಖಲಾಗಿದ್ದು, 156 ಜನರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
SCROLL FOR NEXT