ಬೆಂಗಳೂರು: ಸಾಗರ್ ಅಪೋಲೋ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಮಾಜಿ ಸಚಿವರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ, 70 ವರ್ಷದ ಸಿ.ಗುರುನಾಥ್ ಅವರು ಇಂದು ಆಸ್ಪತ್ರೆ ಕಟ್ಟಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಗುರುನಾಥ್ ಅವರು 1994ರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದರು.
ಏಪ್ರಿಲ್ 18ರಂದು ಗುರುನಾಥ್ ಅವರನ್ನು ತಿಲಕ್ ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಬೇಕಿತ್ತು. ಆದರೆ ಅವರು ಾಸ್ಪತ್ರೆಯ ಕಿಟಕಿಯಿಂದ ಜಿಗಿದು ಆತ್ಮಹತ್ಯೆ ಶರಣಾಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ತಿಲಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics