ಬೆಂಗಳೂರು: ರಾಜ್ಯದಲ್ಲಿ ನೀರಿನ ಅಭಾವ ಹೆಚ್ಚಾಗಿರುವುದರಿಂದ, ಕುಡಿಯುವ ನೀರಿಗೆ ಹೆಚ್ಚುವರಿಯಾಗಿ ರು.100 ಕೋಟಿ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ನಂತರ ಮಾತನಾಡಿದ ಸಚಿವ ಟಿಬಿ ಜಯಚಂದ್ರ, ಕೇಂದ್ರ ಸರ್ಕಾರ 1,540 ಕೋಟಿ ಬಿಡುಗಡೆ ಮಾಡಿತ್ತು. ಆ ಹಣವನ್ನು ಸೇರಿ ಇದುವರೆಗೆ ರಾಜ್ಯದಲ್ಲಿ ಬರ ಪರಿಹಾರಕ್ಕೆ ರು.2,060 ಕೋಟಿ ಖರ್ಚು ಮಾಡಲಾಗಿದೆ. ಈಗ ಮತ್ತೆ ಕುಡಿಯುವ ನೀರಿಗೆ ಹೆಚ್ಚುವರಿಯಾಗಿ ರು.100 ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಬೇಸಿಗೆ ರಜೆಯ 39 ದಿನವೂ ರಾಜ್ಯದ 137 ಬರಪೀಡಿತ ಪ್ರದೇಶಗಳಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.