ಸಾಂದರ್ಭಿಕ ಚಿತ್ರ 
ರಾಜ್ಯ

ಕ್ರಿಮಿನಾಶಕ ಸೇವಿಸಿ ಆಸ್ಪತ್ರೆ ಸೇರಿದ್ದ ರೈತ ಸಾವು: ಚಿಕ್ಕಬಳ್ಳಾಪುರ ಬಂದ್ ಗೆ ಕರೆ

ಕ್ರಿಮಿನಾಶಕ ಸೇವಿಸಿದ್ದ ರೈತ ಆನಂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಬಂದ್ ಗೆ ಕರೆ ನೀಡಲಾಗಿದೆ....

ಚಿಕ್ಕಬಳ್ಳಾಪುರ:  ಕ್ರಿಮಿನಾಶಕ ಸೇವಿಸಿದ್ದ ರೈತ ಆನಂದ್  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಬಂದ್ ಗೆ ಕರೆ ನೀಡಲಾಗಿದೆ.

ಮುಂಜಾಗ್ರತೆ ಕ್ರಮವಾಗಿ ಚಿಕ್ಕಬಳ್ಳಾಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದು, 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಜೆಡಿಎಸ್ ನಿಂದ ಚಿಕ್ಕಬಳ್ಳಾಪುರ ಬಂದ್ ಗೆ ಕರೆ ನೀಡಲಾಗಿದೆ. ಜೆಡಿಎಸ್ ಪಕ್ಷದ ಮುಖಂಡರಿಂದ ಪ್ರತಿಭಟನಾ ಮೆರವಣಿಗೆಗೆ ಸಿದ್ಧತೆ ನಡೆದಿದೆ. ಜಿಲ್ಲಾಡಳಿತ ಭವನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

30 ವರ್ಷಗಳಿಂದ ಆನಂದ್ ಅವರು ಸರ್ಕಾರ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ರಾಜಕೀಯ ವೈಷಮ್ಯಕ್ಕೆ ಫಸಲು ಬೆಳೆದಿದ್ದ ಜಮೀನನ್ನು ಕಸಿದುಕೊಳ್ಳಲು ಗ್ರಾ.ಪಂ ನಿಂದ ನಡೆದ ಪ್ರಯತ್ನವನ್ನು ಪ್ರತಿಭಟಿಸಿ ಅವರು ಬುಧವಾರ ಕ್ರಿಮಿನಾಶಕ ಸೇವಿಸಿದ್ದರು.

ಆಸ್ಪತ್ರೆಯಲ್ಲಿ ಎರಡು ದಿನಗಳ ಸಾವು ಬದುಕಿನ ಅವರ ಹೋರಾಟ ಅಂತ್ಯ ಕಂಡಿದೆ. 3:12 ಎಕರೆ ಜಮೀನಿನಲ್ಲಿ ಅವರು ಗೋಡಂಬಿ ಬೆಳೆ ಬೆಳೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT