ರಾಜ್ಯ

ಬೆಂಗಳೂರಿನಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯಗೊಳಿಸಿ: ಬಿಬಿಎಂಪಿಗೆ ಸಿಎಂ ಸೂಚನೆ

Mainashree
ಬೆಂಗಳೂರು: ನಗರದಲ್ಲಿರುವ ಪ್ರತಿಯೊಂದು ಮನೆಯಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಸೂಚಿಸಿದ್ದಾರೆ. 
ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಬೆಂಗಳೂರು ಅತಿ ವೇಗವಾಗಿ ಬೆಳೆಯುತ್ತಿದೆ. ನಗರದಲ್ಲಿ ಪ್ರತಿ ದಿನ  1,056 ಮಿಲಿಯನ್ ಲೀಟರ್ ನೀರು ಬಳಕೆ ಮಾಡಲಾಗುತ್ತಿದೆ. ಇನ್ನು ಕೆಲವು ವರ್ಷಗಳಲ್ಲೇ ನೀರಿಗೆ ಬೇಡಿಕೆ ಹೆಚ್ಚಾಗುತ್ತದೆ. ಪ್ರತಿ ವರ್ಷ 30 ಟಿಎಂಸಿ ನೀರು ಹೆಚ್ಚಾಗುತ್ತಿದೆ. ಹಾಗಾಗಿ, ಪ್ರತಿಯೊಂದು ಮನೆಯಲ್ಲೂ ಮಳೆ ನೀರು ಸಂಗ್ರಹ ಕಡ್ಡಾಯಗೊಳಿಸುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತೀವ್ರವಾಗಿ ನೀರನ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ತ್ಯಾಜ್ಯ ಸಮಸ್ಯೆ ಕುರಿತು ಮಾತನಾಡಿದ ಅವರು, ನಗರದಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯ ನಿವಾರಣೆಗೆ ಒಂದೇ ಮಾರ್ಗ, ಅದುವೇ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವುದು ಎಂದು ಹೇಳಿದ್ದಾರೆ.
SCROLL FOR NEXT