ರಾಮನಗರ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬುಧವಾರ ರಾಮನಗರದ ಮಂಜುನಾಥ ನಗರದಲ್ಲಿ ನಡೆದಿದೆ.
25 ವರ್ಷದ ರೇಖಾ ಎಂಬ ಮಹಿಳೆ ತನ್ನ ಮಗಳು ಸ್ಪೂರ್ತಿ (9) ಹಾಗೂ ಮಗ ಪ್ರೀತಂ (8)ಗೆ ನೇಣು ಹಾಕಿ ನಂತರ ತಾನೂ ನೇಣಿಗೆ ಶರಣಾಗಿದ್ದಾಳೆ.
ಪೊಲೀಸ್ ಮೂಲಗಳ ಪ್ರಕಾರ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರೇಖಾ ತನ್ನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.