ವೇಶ್ಯಾವಾಟಿಕೆ: ಕಾಮಾಕ್ಷಿಪಾಳ್ಯದ ಲಾಡ್ಜ್ ಮೇಲೆ ದಾಳಿ, 5 ಯುವತಿಯರ ರಕ್ಷಣೆ, 6 ಮಂದಿ ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ಕಾಮಾಕ್ಷಿಪಾಳ್ಯದ ಲಾಡ್ಜ್ ವೊಂದರ ಮೇಲೆ ಗುರುವಾರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಐವರು ಯುವತಿಯರನ್ನು...
ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಕಾಮಾಕ್ಷಿಪಾಳ್ಯದ ಲಾಡ್ಜ್ ವೊಂದರ ಮೇಲೆ ಗುರುವಾರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಐವರು ಯುವತಿಯರನ್ನು ರಕ್ಷಿಸಿದ್ದಾರೆ ಮತ್ತು ಓರ್ವ ಮಹಿಳೆ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯದಲ್ಲಿರುವ ಬಾಲಾಜಿ ಕಂಪರ್ಟ್ಸ್ ಡಿಲಕ್ಸ್ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮರ್ಜಿನಾ ಬೇಗಂ(27), ಕೆಂಚನಹಳ್ಳಿಯ ಅಶೋಕ್(32), ಕೆಬ್ಬೆಪುರದ ಆನಂದ್(22) ಕನಕಪುರದ ಅಕ್ಮಲ್ ಪಾಷಾ(26) ಹೊಳೆನರಸಿಪುರದ ಚಂದ್ರು(32) ಹಾಗೂ ಸುಂಕದಕಟ್ಟೆಯ ಮಹೇಶ್ ಎಂಬುವವರನ್ನು ಬಂಧಿಸಿದ್ದಾರೆ.
ಪೊಲೀಸರು ಬಂಧಿತ ಆರೋಪಿಗಳಿಂದ 7 ಮೊಬೈಲ್ ಹಾಗೂ 9 ಸಾವಿರ ರುಪಾಯಿ ನಗದು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ ಪಶ್ಚಿಮ ಬಂಗಾಳ ಹಾಗೂ ತೆಲಂಗಾಣ ಮೂಲದ ಇಬ್ಬರು ಯುವತಿಯರು ಸೇರಿದಂತೆ ಐವರನ್ನು ರಕ್ಷಿಸಿದ್ದಾರೆ.
ಆರೋಪಿಗಳು ಯುವತಿಯರನ್ನು ಕೆಲಸ ಕೊಡಿಸುವುದಾಗಿ ಹೇಳಿ ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.