ಟಿ.ಎಂ ವಿಜಯ ಭಾಸ್ಕರ್ 
ರಾಜ್ಯ

ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಹುದ್ದೆಯಿಂದ ದಕ್ಷ ಅಧಿಕಾರಿ ವಿಜಯ ಭಾಸ್ಕರ್ ಎತ್ತಂಗಡಿ

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್‌ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ...

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್‌ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಜಯಭಾಸ್ಕರ್‌ ಅವರನ್ನು ಅರಣ್ಯ , ಪರಿಸರ  ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ಕಳೆದ ವಾರವಷ್ಟೇ ವರ್ಗಾವಣೆ ಮಾಡಲಾಗಿತ್ತು.  ನಂತರವೂ ಅವರನ್ನು ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾಗಿ ಮುಂದುವರಿಸಲಾಗಿತ್ತು.

ವಿಜಯಭಾಸ್ಕರ್ ಏಳು ತಿಂಗಳ ಹಿಂದೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.  ಬೆಳಿಗ್ಗೆ 6 ಗಂಟೆಯಿಂದಲೇ ಕಚೇರಿಗಳಿಗೆ ಹಠಾತ್‌ ಭೇಟಿ ನೀಡುವ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿಸಿದ್ದರು.ಅನಧಿಕೃತ ಸಂಪರ್ಕಗಳ ವಿರುದ್ಧ ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ನೀರಿನ ಶುಲ್ಕ ಬಾಕಿ ವಸೂಲಾತಿ ಆಂದೋಲನವನ್ನೂ ಶುರು ಮಾಡಿದ್ದರು. ಇದರಿಂದಾಗಿ ಮೂರು ತಿಂಗಳ ಅವಧಿಯಲ್ಲಿ ರು. 50 ಕೋಟಿಗೂ ಅಧಿಕ ಬಾಕಿ ವಸೂಲಿ ಆಗಿತ್ತು.

‘ಜಲಮಂಡಳಿ  ಅಧ್ಯಕ್ಷರಾಗಿದ್ದ ವಿಜಯಭಾಸ್ಕರ್‌ ಹಾಗೂ ಬಿಬಿ ಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮಥಾಯಿ  ಅವರ ವರ್ಗಾವಣೆಯಲ್ಲಿ ನನ್ನ ಪಾತ್ರ ಇಲ್ಲ. ವಿಜಯಭಾಸ್ಕರ್‌ ಅವರು ಉತ್ತಮ ಅಧಿಕಾರಿ. ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರಿಗೆ ಜಲಮಂಡಳಿ ಅಧ್ಯಕ್ಷರ ಹೊಣೆ ವಹಿಸಲಾಗಿದೆ. ಮಹೇಂದ್ರ ಜೈನ್‌ ಅವರು ಶನಿವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಂಡಳಿಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!