ಸಾಂದರ್ಭಿಕ ಚಿತ್ರ 
ರಾಜ್ಯ

ಕೆಪಿಎಸ್ ಸಿ ಹುದ್ದೆಗಳ ಸಂದರ್ಶನಕ್ಕೆ ಅರ್ಹರ ಪಟ್ಟಿ ಪ್ರಕಟ: ಸಂದರ್ಶನ ವಿಳಂಬ ಸಾಧ್ಯತೆ

ಕರ್ನಾಟಕ ಲೋಕಾ ಸೇವಾ ಆಯೋಗ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಸಂದರ್ಶನಕ್ಕೆ...

ಬೆಂಗಳೂರು: ಕರ್ನಾಟಕ ಲೋಕಾ ಸೇವಾ ಆಯೋಗ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 
464 ಗೆಜೆಟೆಡ್ ಪ್ರೊಬೇಷನರಿ ಹುದ್ದಗಳ ಸಂದರ್ಶನಕ್ಕೆ 1,389 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಹುದ್ದೆಗಳ ನೇಮಕಾತಿಗೆ 2014ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಾಥಮಿಕ ಪರೀಕ್ಷೆ ಕಳೆದ ಏಪ್ರಿಲ್ ನಲ್ಲಿ ನಡೆದಿತ್ತು. ಅದರಲ್ಲಿ ಆಯ್ಕೆಯಾದ 7,884 ಅಭ್ಯರ್ಥಿಗಳಿಗೆ ಕಳೆದ ಸೆಪ್ಟೆಂಬರ್ ನಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. 
ಸಂದರ್ಶನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಂದರ್ಶನ ನಡೆಸುವವರ ಬಗ್ಗೆ ಅಭ್ಯರ್ಥಿಗಳಿಂದ ಆಕ್ಷೇಪ ಕೇಳಿಬರುತ್ತಿದೆ. 2011ರಲ್ಲಿ 362 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚಿನ ಅಕ್ರಮ ನಡೆದಿರುವುದನ್ನು ಸಿಐಡಿ ಪತ್ತೆ ಹಚ್ಚಿ, ಕೆಪಿಎಸ್​ಸಿಯಲ್ಲಿದ್ದಎಲ್ಲ ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿರಬಹುದೆಂದು ವರದಿಯಲ್ಲಿ ತಿಳಿಸಿತ್ತು. ಸಿಐಡಿ ತನಿಖಾ ವರದಿಯ ಆಧಾರದಲ್ಲಿ ಕಳಂಕಿತರಾಗಿ ರುವ ಸದಸ್ಯರನ್ನಿಟ್ಟುಕೊಂಡು ಸಂದರ್ಶನ ನಡೆಸುವ ಗೊಂದಲಗಳು ಎದುರಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ