ರೈತರ ಮೇಲೆ ಪೊಲೀಸರ ಲಾಠಿ ಚಾರ್ಜ್ 
ರಾಜ್ಯ

ಪೊಲೀಸ್ ದೌರ್ಜನ್ಯ ಪ್ರಕರಣ: ನವಲಗುಂದ ಸಿಪಿಐ, 8 ಪೇದೆಗಳ ಅಮಾನತು

ನವಲಗುಂದದಲ್ಲಿ ರೈತರ ಮೇಲೆ ಲಾಠಿಜಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಗುಂದ ಸಿಪಿಐ ಹಾಗೂ ಎಂಟು ಪೊಲೀಸ್ ಪೇದೆಗಳನ್ನು ಅಮಾನತು...

ಧಾರವಾಡ: ನವಲಗುಂದದಲ್ಲಿ ರೈತರ ಮೇಲೆ ಲಾಠಿಜಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಗುಂದ ಸಿಪಿಐ ಹಾಗೂ ಎಂಟು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.
ವಿಡಿಯೋ ದೃಶ್ಯಗಳನ್ನು ಆಧರಿಸಿ ನವಲಗುಂದ ಸಿಪಿಐ ಡಾ.ಅರುಣ್ ಕುಮಾರ್ ಹಪ್ಪಳಿ ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಯ ಎಂಟು ಪೇದೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉತ್ತರ ವಲಯ ಐಜಿಪಿ ಡಾ. ಕೆ. ರಾಮಚಂದ್ರರಾವ್ ಅವರು ಹೇಳಿದ್ದಾರೆ.
ನವಲಗುಂದದ ಇಬ್ಬರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯಪುರ ಜಿಲ್ಲೆಯ ಇಬ್ಬರು ಸೇರಿ ಒಟ್ಟು 8 ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. ಆದರೆ ಸದ್ಯ ಪೊಲೀಸ್ ಪೇದೆಗಳ ಹೆಸರುಗಳನ್ನು ಬಹಿರಂಗಪಡಿಸೋದಿಲ್ಲ ಎಂದು ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಜುಲೈ 30 ರಂದು ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಯಮನೂರು ಗ್ರಾಮಸ್ಥರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video