ಕೆ. ಮರಿಗೌಡ 
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಸಿಎಂ ಆಪ್ತ ಮರಿಗೌಡಗೆ ನ್ಯಾಯಾಂಗ ಬಂಧನ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ...

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಬುಧವಾರ ಜೈಲು ಪಾಲಾಗಿದ್ದಾರೆ. 
ಸುಮಾರು ಒಂದು ತಿಂಗಳ ನಂತರ ಇಂದು ಪೊಲೀಸರಿಗೆ ಶರಣಾದ ಮರಿಗೌಡ ಅವರನ್ನು ನಜರ್ ಬಾದ್ ಪೊಲೀಸರು ಮೈಸೂರಿನ ಮೂರನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಯನ್ನು ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಬಳಿಕ ಪೊಲೀಸರು ಸಿಎಂ ಆಪ್ತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.
ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಿನ್ನೆ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದ ಮರಿಗೌಡ ಇಂದು, ವಕೀಲರ ಜೊತೆ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಗೆ ಹಾಜರಾಗಿ, ಪೊಲೀಸರಿಗೆ ಶರಣಾಗಿದ್ದರು.
ಮರಿಗೌಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನ ಭೀತಿಯಲ್ಲಿದ್ದ ಸಿಎಂ ಆಪ್ತ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಎನ್ನಲಾಗಿದೆ.
ಮರಿಗೌಡ ಅವರು ಅಧಿಕಾರಿಯ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಶಿಖಾ ಅವರು ಜುಲೈ 3ರಂದು ಕಾಂಗ್ರೆಸ್ ನಾಯಕ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಮರಿಗೌಡ ತಲೆಮರೆಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ