ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ಮೈಸೂರು ಕೋರ್ಟ್ ಸ್ಫೋಟ: ಸ್ಥಳಕ್ಕೆ ಎನ್ಐಎ ಮತ್ತು ಕೇರಳ ಪೊಲೀಸ್ ತಂಡ ಆಗಮನ

ಜಿಲ್ಲಾ ನ್ಯಾಯಾಲಯ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಕೇರಳ ...

ಮೈಸೂರು: ಜಿಲ್ಲಾ ನ್ಯಾಯಾಲಯ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಕೇರಳ ಪೊಲೀಸರ ತಂಡ ಮಂಗಳವಾರ ಬಂದು ಪರಿಶೀಲನೆ ನಡೆಸಿದ್ದಾರೆ.

ಆರು ತಿಂಗಳಿನಿಂದ ಈಚೆಗೆ ರಾಷ್ಟ್ರದ ವಿವಿಧೆಡೆ ನ್ಯಾಯಾಲಯದ ಆವರಣಗಳಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟ ಪ್ರಕರಣಗಳಿಗೂ ಇದಕ್ಕೂ ಇರುವ ಸಾಮ್ಯತೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಜೂನ್ 15 ರಂದು ಕೇರಳದ ಕೊಲ್ಲಂ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿತ್ತು.  ಈ ಹಿನ್ನೆಲೆಯಲ್ಲಿ  ಆಗಮಿಸಿರುವ ಕೇರಳ ವಿಶೇಷ ತಂಡ ತನಿಖೆ ನಡೆಸುತ್ತಿದೆ.

ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳವು ಆಗಮಿಸಿ ಸ್ಫೋಟ ನಡೆದ ಸ್ಥಳ ಹಾಗೂ ನ್ಯಾಯಾಲಯದ ಆವರಣವನ್ನು ಪರಿಶೀಲನೆ ನಡೆಸಿತು.  ಆಂತರಿಕ ಭದ್ರತಾ ವಿಭಾಗದ ಡಿಜಿಪಿ ನೀಲಮಣಿ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಪಕ್ಕದ ಬಯಲು ಪ್ರದೇಶದಲ್ಲಿ ಕೆಲವು ವೈರ್‌ಗಳು, ಕಬ್ಬಿಣದ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಫೋಟದ ನಂತರ ನಗರದ ಹಲವು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರೈಲು ನಿಲ್ದಾಣ, ಅರಮನೆ, ಮೃಗಾಲಯ ಸೇರಿ ದಂತೆ ಹಲವೆಡೆ ಕಟ್ಟೆಚ್ಚರವಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT