ಮಂಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ನಿನ್ನೆ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಮಂಗಳೂರು ಮತ್ತು ಕೊಚ್ಚಿಯಿಂದ ದುಬೈಗೆ ಹೋಗಬೇಕಿದ್ದ ವಿಮಾನಗಳನ್ನು ರದ್ದುಪಡಿಸಲಾಗಿದೆ ಎಂದು ಎರಡೂ ವಿಮಾನ ನಿಲ್ದಾಣಗಳ ನಿರ್ದೇಶಕರು ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾದ ಇತರ ಭಾಗಗಳಿಗೆ ಹೋಗುವ ವಿಮಾನಗಳು ಎಂದಿನಂತೆ ಹಾರಾಟದಲ್ಲಿ ನಿರತವಾಗಿವೆ. ನಿನ್ನೆ ರಾತ್ರಿ 11 ಗಂಟೆಗೆ ದುಬೈಗೆ ಮಂಗಳೂರಿನಿಂದ ಹೊರಡಬೇಕಿದ್ದ ಜೆಟ್ ಏರ್ ವೇಸ್ ವಿಮಾನದ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಟಿ.ರಾಧಾಕೃಷ್ಣ ತಿಳಿಸಿದ್ದಾರೆ.