ಮೈಸೂರು ದಸರಾ ಮತ್ತು ಕವಿ ಚೆನ್ನವೀರ ಕಣವಿ (ಸಂಗ್ರಹ ಚಿತ್ರ) 
ರಾಜ್ಯ

ಮೈಸೂರು ದಸರಾ-2016ಕ್ಕೆ ಖ್ಯಾತ ಕವಿ ಚೆನ್ನವೀರ ಕಣವಿ ಚಾಲನೆ?

ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಖ್ಯಾತ ಕವಿ ಚೆನ್ನವೀರ ಕಣವಿ ಅವರಿಂದ ಚಾಲನೆ ನೀಡಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ಸೇರಿದ್ದ ಮೈಸೂರು ದಸರಾ ಸಮಿತಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಖ್ಯಾತ ಕವಿ ನಿಸಾರ್ ಅಹ್ಮದ್, ಎಸ್ ಎಲ್  ಬೈರಪ್ಪ, ಸುತ್ತೂರು ಮಠದ ಶ್ರೀಗಳಾದ ಶಿವರಾತ್ರಿ ದೇಶೀ ಕೇಂದ್ರ ಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅಥವಾ ಚೆನ್ನವೀರ ಕಣವಿ ಅವರಿಂದ ದಸರೆಗೆ ಉದ್ಧಾಟನೆ  ಮಾಡಿಸುವ ಕುರಿತು ಪ್ರಸ್ತಾಪವಾಗಿತ್ತು. ಆದರೆ ಅಂತಿಮವಾಗಿ ದಸರಾ ಸಮಿತಿ ಚೆನ್ನವೀರಕಣವಿ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

ಇದೇ ಮಂಗಳವಾರ ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ. ಇದೇ ಅಕ್ಟೋಬರ್ 1ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ  ಚಾಲನೆ ನೀಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!