ಕೆ ಮರಿಗೌಡ 
ರಾಜ್ಯ

ಮರಿಗೌಡ ಜಾಮೀನು ಅರ್ಜಿ ವಜಾ, ಸಿಎಂ ಆಪ್ತನಿಗೆ ಜೈಲೇ ಗತಿ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ.
ಜಾಮೀನು ಕೋರಿ ಮರಿಗೌಡ ಸಲ್ಲಿಸಿದ್ದ ಅರ್ಜಿಯನ್ನು ನಗರದ 3ನೇ ಜೆಎಂಎಫ್ ನ್ಯಾಯಾಲಯ ಇಂದು ವಜಾ ಮಾಡಿದ್ದು, ಇದರಿಂದ ಮರಿಗೌಡ ಜೈಲುವಾಸ ಮುಂದುವರಿದಂತಾಗಿದೆ.
ಸುಮಾರು ಒಂದು ತಿಂಗಳ ನಂತರ ಪೊಲೀಸರಿಗೆ ಶರಣಾದ ಮರಿಗೌಡ ಅವರನ್ನು ನಜರ್ ಬಾದ್ ಪೊಲೀಸರು ಮೈಸೂರಿನ ಮೂರನೇ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಯನ್ನು ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಕಡೆಗೂ ಬುಧವಾರ ಪೊಲೀಸರಿಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು