ವಜೂಬಾಯಿ ವಾಲಾ 
ರಾಜ್ಯ

ಸರ್ಕಾರಕ್ಕೆ ಶಾಕ್ ನೀಡಿದ ಗವರ್ನರ್ : ಎಸ್ಸಿ- ಎಸ್ಟಿ ಗುತ್ತಿಗೆ ಮೀಸಲು ಮಸೂದೆಗೆ ಬ್ರೇಕ್

ರಾಜ್ಯ ಸರ್ಕಾರದ ಗುತ್ತಿಗೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ...

ಬೆಂಗಳೂರು: ರಾಜ್ಯ ಸರ್ಕಾರದ ಗುತ್ತಿಗೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಮಸೂದೆಗೆ ರಾಜ್ಯಪಾಲ ವಜುಭಾಯ್‌ ವಾಲ ಅಂಕಿತ ಹಾಕಲು ಹಿಂದೇಟು ಹಾಕಿದ್ದಾರೆ.

ಪರಿಶಿಷ್ಟ ಜಾತಿ  ಮತ್ತು ವರ್ಗದ ಗುತ್ತಿಗೆದಾರರಿಗೆ 50 ಲಕ್ಷ ರೂ. ವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡುವ ಉದ್ದೇಶದ ವಿಧೇಯಕವನ್ನು ರಾಷ್ಟ್ರಪತಿಗಳ ಅವಗಾಹನೆಗೆ ಕಳುಹಿಸಲು ರಾಜ್ಯಪಾಲ ವಜುಭಾಯಿ ವಾಲಾ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರವು ಈ ವಿಧೇಯಕ ಜಾರಿ ಬಗ್ಗೆ ತೀವ್ರ ಆಸಕ್ತಿ ಹೊಂದಿತ್ತು. ಆದರೆ, ರಾಜ್ಯಪಾಲರು ಈ ವಿಧೇಯಕಕ್ಕೆ ಅಂಕಿತ ಹಾಕಲು ಹಿಂಜರಿದಿದ್ದು, ತಮ್ಮ ಆಕ್ಷೇಪಣೆಗಳೊಂದಿಗೆ ಸದರಿ ವಿಧೇಯಕವನ್ನು ರಾಷ್ಟ್ರಪತಿಗಳ ಅವಗಾಹನೆಗೆ ಕಳುಹಿಸಲು ತೀರ್ಮಾನಿಸಿದ್ದಾರೆ.

ಈ ಮೂಲಕ ವಿಧೇಯಕ ಜಾರಿ ತೀವ್ರ ವಿಳಂಬವಾಗುವ ಸಾಧ್ಯತೆ ಅಥವಾ ವಿಧೇಯಕವೇ ಕೈ ಬಿಟ್ಟು ಹೋಗುವ ಸಾಧ್ಯತೆ ಮೂಡಿರುವುದು ಸರ್ಕಾರಕ್ಕೆ ತೀವ್ರ ಹಿನ್ನಡೆ ಎನ್ನಲಾಗುತ್ತಿದೆ. ಮೀಸಲಾತಿ ನೀಡುವ ವಿಶೇಷ ಸವಲತ್ತಿಗೆ ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎಂಬ ಕಾರಣ ನೀಡಿರುವ ರಾಜ್ಯಪಾಲರು ವಿಧೇಯಕ ರಾಷ್ಟ್ರಪತಿಗೆ ಕಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಜ್ಯಸರ್ಕಾರವು ಎಸ್‌ಸಿ-ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರೂ. ಮೊತ್ತದವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲು ನೀಡಲು ಅವಕಾಶ ಕಲ್ಪಿಸಲು ವಿಧೇಯಕ ಮಂಡಿಸಿ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಕಳುಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?