ರಾಜ್ಯ

ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣ: ಧರ್ಮಾಧಿಕಾರಿ ಹೆಗ್ಗಡೆ ಕುಟುಂಬಕ್ಕೆ ಕ್ಲೀನ್ ಚಿಟ್

Shilpa D

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಯವರ ಕುಟುಂಬದವರ ಪಾತ್ರ ಇಲ್ಲವೆಂದು ಸಿಬಿಐ ವರದಿ ಸಲ್ಲಿಸಿದೆ ಎಂದು ಧರ್ಮಸ್ಥಳದ  ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ವಕೀಲ ಪಿ.ಪಿ. ಹೆಗ್ಡೆ  ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿ ಸಂತೋಷ್‌ ರಾವ್‌ ಕೃತ್ಯ ಎಸೆಗಿರುವುದು ತನಿಖೆಯಿಂದ ಸಾಬೀತಾಗಿದೆ ಎಂದು ಸಿಬಿಎ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಧರ್ಮಾಧಿಕಾರಿ ಅವರ ಕುಟುಂಬ ವರ್ಗದವರಿಗೆ ಕ್ಲೀನ್‌ಚಿಟ್‌ ನೀಡಿದೆ ಎಂದು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು ಸಾಕ್ಷಿದಾರರ ಹೇಳಿಕೆಗಳು, ವೈದ್ಯರ ವರದಿಗಳನ್ನು ವಿಶ್ಲೇಷಿಸಿದಾಗ ಆರೋಪಿ ಸಂತೋಷ ರಾವ್‌ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಈ ಬಗ್ಗೆ ಚೆನ್ನೈನ ವಿಶೇಷ ಸಿಬಿಐ ಅಧಿಕಾರಿಗಳ ತಂಡದ ತನಿಖಾಧಿಕಾರಿ ಪಿವಿಎಸ್‌ಎನ್‌ ರಾಜು ಅವರು ವಿವರವಾದ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಸಿಬಿಐ ಸಲ್ಲಿಸಿದ ಅಂತಿಮ ತನಿಖಾ ವರದಿಯಿಂದಾಗಿ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವೊಂದು ವ್ಯಕ್ತಿಗಳು ಮಾಡಿರುವ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ದುರುದ್ದೇಶದಿಂದ ಕೆಲವೊಂದು ವ್ಯಕ್ತಿಗಳು ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದವರ ಮತ್ತು ಇತರರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ತೇಜೋವಧೆ ಮಾಡಿದ್ದಾರೆ. ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

SCROLL FOR NEXT