ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದ್ದು, 1016 ಅರ್ಜಿಗಳು ರಾಜ್ಯಾದ್ಯಂತ ಸಲ್ಲಿಕೆಯಾಗಿವೆ. ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಬಂಧಿಸಲಾಗಿದೆ.
ಖನಿಜ ಭವನದಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸಿಬಿ ಪೊಲೀಸ್ ಠಾಣೆಯ ಉದ್ಘಾಟನೆ ವೇಳೆ ಈ ಮಾಹಿತಿ ದೊರೆತಿದ್ದು, ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬರುತ್ತಿರುವ ಅರ್ಜಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರವೊಂದರಲ್ಲೇ ಭ್ರಷ್ಟಾಚಾರ ನಿಗ್ರಹ ದಳಕ್ಕೆ 246 ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಸ್ವೀಕರಿಸಲಾಗಿರುವ ಅರ್ಜಿಗಳನ್ನು ಆಧರಿಸಿ 6 ಪ್ರಕರಣ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.