ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ತೆರಿಗೆ ಪಾವತಿಸದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್ ಮೇಲೆ ಬಿಬಿಎಂಪಿ ದಾಳಿ, ಜಪ್ತಿ

ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ನಗರದ ವಿಠಲ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್ ಹೊಟೇಲ್ ಮೇಲೆ ದಾಳಿ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು ಹೋಟೆಲ್ಯ...

ಜೆಡಬ್ಲ್ಯೂ ಮ್ಯಾರಿಯೇಟ್
Shilpa D
Updated On : 11 Aug 2016, 12:29 pm

ಬೆಂಗಳೂರು: ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ನಗರದ ವಿಠಲ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್ ಹೊಟೇಲ್ ಮೇಲೆ ದಾಳಿ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು ಹೋಟೆಲ್ ಗೆ ಸೇರಿದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಮ್ಯಾರಿಯೇಟ್ ಹೊಟೇಲ್ 2012-2013ನೇ ಸಾಲಿನ ಆಸ್ತಿ ತೆರಿಗೆಯನ್ನು ಹೋಟೆಲ್ ಪಾವತಿಸಿಲ್ಲ. ಸುಮಾರು 5.59 ಕೋಟಿ ಆಸ್ತಿ ತೆರಿಗೆ ಪಾವತಿಸಬೇಕಾಗಿದೆ. ಹೀಗಾಗಿ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ 5 ಸೋಫಾ ಮತ್ತು 25 ಕುರ್ಚಿಗಳನ್ನು ಬಿಬಿಎಂಪಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬಿಬಿಎಂಪಿ ಜಂಟಿ ಆಯುಕ್ತ ಯತೀಶ್ ಕುಮಾಕರ್ ನೇತತ್ವದಲ್ಲಿ ದಾಳಿ ನಡೆಸಲಾಯಿತು. ಸದ್ಯ ಹೋಟೆಲ್ 1.9 ಕೋಟಿ ತೆರಿಗೆ ಕಟ್ಟಲು ಮುಂದಾಗಿದೆ. ಆದರೇ 5.59 ಕೋಟಿ ರೂ ಪೂರ್ಣ ಪ್ರಮಾಣದ ತೆರಿಗೆ ಹಣವನ್ನು ಕಟ್ಟುವಂತೆ ಬಿಬಿಎಂಪಿ ಪಟ್ಟು ಹಿಡಿದಿದೆ. ಬಿಬಿಎಂಪಿ ಅಧಿಕಾರಿಗಳ ಮನವೊಲಿಸಲು ಹೋಟೆಲ್ ಸಿಬ್ಬಂದಿ ಪ್ರಯತ್ನಪಟ್ಟರೂ ಯಾವುದೇ ಪ್ರಯೋಜನವಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments