ಧಾರವಾಡದಲ್ಲಿ ರೈತರ ಸಂಭ್ರಮಾಚರಣೆ (ಸಂಗ್ರಹ ಚಿತ್ರ) 
ರಾಜ್ಯ

ರೈತ ಹೋರಾಟಗಾರರಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮಾಚರಣೆ

ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೀಡಾಗಿದ್ದ ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಧಾರವಾಡದಲ್ಲಿ ಸಂಬಂಧಿಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಧಾರವಾಡ: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬಂಧನಕ್ಕೀಡಾಗಿದ್ದ ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಧಾರವಾಡದಲ್ಲಿ ಸಂಬಂಧಿಕರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಅತ್ತ ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೋರಾಟಗಾರರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಇತ್ತ,  ಧಾರವಾಡದಲ್ಲಿ ರೈತಪರ ಸಂಘಟನೆಗಳ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಪ್ರಮುಖವಾಗಿ ಪ್ರತಿಭಟನೆ ಬಳಿಕ ನಡೆದ ಪೊಲೀಸ್ ಲಾಠಿ ಚಾರ್ಜ್ ನಿಂದ ವ್ಯಾಪಕ ಸುದ್ದಿಗೆ  ಗ್ರಾಸವಾಗಿದ್ದ ನವಲಗುಂದ ತಾಲ್ಲೂಕಿನ ಯಮನೂರು ಗ್ರಾಮದಲ್ಲಿ ರೈತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ರೈತರ ಈ ಸಂಭ್ರಮಾಚರಣೆಯಲ್ಲಿ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇಂದು ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆಯೇ  ನವಲಗುಂದ ಗ್ರಾಮಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರು ತಮ್ಮ ಬೆಂಬಲಿಗರಿಗೆ ಮತ್ತು ರೈತರಿಗೆ ಸಿಹಿ ತಿನ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT