ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ದೇಶವಿರೋಧಿ ಘೋಷಣೆ ಪ್ರಕರಣ: ತನಿಖೆಗೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಅಸಹಕಾರ!

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದರೂ, ಸಂಸ್ಥೆ ಪೋಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅಮ್ನೆಸ್ಟಿ ಇಂಟರ್ ನ್ಯಾಷನಲ್
Srinivas Rao BV
Updated On : 18 Aug 2016, 4:59 am

ಬೆಂಗಳೂರು: ಕಾಶ್ಮೀರ ಕುರಿತ ಚರ್ಚೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದರೂ, ಸಂಸ್ಥೆ ಪೋಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿರುವ ವಿಡಿಯೋ ನ್ನು ನೀಡುವಂತೆ ತನಿಖಾಧಿಕಾರಿಗಳು ಮೂರೂ ದಿನಗಳ ಹಿಂದೆಯೇ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಗೆ ನೋಟಿಸ್ ನೀಡಿದ್ದರಾದರೂ, ಈ ವರೆಗೂ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿತ್ತಾದರೂ, ಈಗ ಅಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ತನಿಖೆಗೆ ಅಸಹಕಾರ ನೀಡುತ್ತಿರುವ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments