ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣಿಗೆ ಶರಣಾದ ವ್ಯಕ್ತಿ
ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾನೂ ನೇಣಿಗೆ ಶರಣಾದ ದಾರುಣ ಘಟನೆ ಬೆಂಗಳೂರು...
ಬೆಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾನೂ ನೇಣಿಗೆ ಶರಣಾದ ದಾರುಣ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಿಗೊಂಡನ ಹಳ್ಳಿಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಕೌಟುಂಬಿಕ ಸಮಸ್ಯೆಗಳಿಂದಾಗಿ 35 ವರ್ಷದ ಸತೀಶ್ ಎಂಬುವವರು ತನ್ನ ಪತ್ನಿ ಮಂಜುಳಾ (23) ಮಕ್ಕಳಾದ ವಿಜಯ್ (5)ಮತ್ತು ಶ್ರೇಯಾ(2) ರನ್ನು ಕತ್ತು ಹಿಸುಕಿ ಕೊಲೆ ಮಾಡಿ ನಂತರ ನೇಣಿಗೆ ಶರಣಾಗಿದ್ದಾನೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕುಡಿದು ಬಂದಿದ್ದ ಸತೀಶ್ ತನ್ನ ಪತ್ನಿ ಮಂಜುಳಾಳೊಂದಿಗೆ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ಹೋಗಿ ಸತಿಶ್ ಪತ್ನಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾನೆ. ಬಳಿಕ ಮಕ್ಕಳನ್ನು ಹತ್ಯೆ ಮಾಡಿ ತಾನು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಕುಂಬಳಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.