ಮುಖ್ಯಮಂತ್ರಿ ಸಿದ್ದಾರಾಮಯ್ಯ 
ರಾಜ್ಯ

ರಾಜ್ಯದಲ್ಲಿ ಮತ್ತೆ ಮಳೆ ಕೊರತೆ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ನೈರುತ್ಯ ಮುಂಗಾರು ವೈಫಲ್ಯದಿಂದ ಮತ್ತೆ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಕೇಂದ್ರದ ಗಮನಕ್ಕೆ ತರಲು ಈಗಾಗಲೇ ಯತ್ನ ನಡೆಸುತ್ತಿರುವ ರಾಜ್ಯ ಸರ್ಕಾರ ಪ್ರಧಾನಮಂತ್ರಿ...

ಬೆಂಗಳೂರು: ನೈರುತ್ಯ ಮುಂಗಾರು ವೈಫಲ್ಯದಿಂದ ಮತ್ತೆ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗುವ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಕೇಂದ್ರದ ಗಮನಕ್ಕೆ ತರಲು ಈಗಾಗಲೇ ಯತ್ನ ನಡೆಸುತ್ತಿರುವ ರಾಜ್ಯ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗುರುವಾರ ಪತ್ರವನ್ನು ಬರೆದಿದ್ದಾರೆ.

ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು, ರಾಜ್ಯದಲ್ಲಿ ಉಂಟಾಗಿರುವ ಮಾನ್ಸೂನ್ ಮಳೆ ವೈಫಲ್ಯ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದಾರೆ. ಜಲಾಶಯಗಳಲ್ಲಿ ಪ್ರಸ್ತುತ ಇರುವ ನೀರಿನ ಮಟ್ಟ ಪ್ರಮುಖವಾಗಿ ಕಾವೇರಿ ನದಿಯಲ್ಲಿರುವ ನೀರಿನ ಪ್ರಮಾಣ ಅತ್ಯಂತ ಕಡಿಮೆಯಿದ್ದು, ನೀರಿನ ಕೊರತೆಯಿಂದ ಉಂಟಾಗುವ ಕೃಷಿ ಸಮಸ್ಯೆ ಹಾಗೂ ವಿದ್ಯುತ್ ಸಮಸ್ಯೆ ಕುರಿತಂತೆ ವಿವರ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಸ್ತುತ ವರ್ಷದಲ್ಲಿ ಕೇವಲ ಶೇ.10ರಷ್ಟು ಮಾನ್ಸೂನ್ ಮಳೆಯಾಗಿದ್ದು, ಜಲಾಶಯಗಳ ಭರ್ತಿಗೆ ಮೂಲವೆಂದೇ ಹೇಳಲಾಗುವ ಮಲೆನಾಡು ಪ್ರದೇಶದಲ್ಲಿಯೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಕುಡಿಯುವ ನೀರಿಗೂ ಬರ ಪರಿಸ್ಥಿತಿ ಎದುರಾಗಲಿದೆ.

ಪ್ರಸ್ತುತ ಜಲಾಶಯಗಳಲ್ಲಿ ಶೇ.46-48 ರಷ್ಟು ನೀರನ್ನು ಸಂಗ್ರಹಿಸಲಾಗಿದೆ. 7 ಲಕ್ಷ ಹೆಕ್ಟೇರ್ ನಲ್ಲಿ ಕೇವಲ 2.42 ಲಕ್ಷ ಹೆಕ್ಟೇರ್ ನಲ್ಲಿ (ಶೇ.35) ಭತ್ತ ಕೃಷಿ ಮಾಡಲಾಗಿದೆ. ಕೆಆರ್ ಎಸ್ ನಲ್ಲಿ ನೀರಿನ ಮಟ್ಟ ಕಡಿಮೆ ಇರುವುದರಿಂದ ಮುಂಬರುವ ದಿನಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂದೆ ಇನ್ನಿತರೆ ಕಡೆಗಳಲ್ಲಿ ಕುಡಿಯುವ ನೀರಿಗೆ ತೊಂದರೆಯುಂಟಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್