ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಆಮ್ನೆಸ್ಟಿ ವಿವಾದ: ರಾಷ್ಟ್ರೀಯ ಭದ್ರತೆಯೊಂದಿಗೆ ಕಾಂಗ್ರೆಸ್ ಆಟವಾಡುತ್ತಿದೆ- ಬಿಜೆಪಿ ಆರೋಪ

ಆಮ್ನೆಸ್ಟಿ ವಿವಾದದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭಾನುವಾರ ಆರೋಪಿಸಿದೆ...

ಬಿಜೆಪಿ ನಾಯಕ ಎಸ್. ಪ್ರಕಾಶ್
Manjula VN
Updated On : 21 Aug 2016, 12:34 pm

ಬೆಂಗಳೂರು: ಆಮ್ನೆಸ್ಟಿ ವಿವಾದದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭಾನುವಾರ ಆರೋಪಿಸಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಭಾರತ ವಿರೋಧಿ ಘೋಷಣೆ ಕೂಗಿ ವಿವಾದಕ್ಕೀಡಾಗಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾಗೆ ಕರ್ನಾಟಕ ಗೃಹ ಸಚಿವ ಪರಮೇಶ್ವರ ಅವರು ಕ್ಲೀಟ್ ಚಿಟ್"ನ್ನು ನೀಡಿದ್ದಾರೆ. ಪರಮೇಶ್ವರ್ ಅವರು ಕಾಂಗ್ರೆಸ್ ಹೈಕಮಾಂಡ್ ನ ಆದೇಶದಂತೆ ಕೆಲಸ ಮಾಡುತ್ತಿದ್ದಾರೆಂಬುದು ಇದರಿಂದ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಸಾಕಷ್ಟು ಸುಧೀರ್ಘ ಚರ್ಚೆ ನಂತರ ಬೆಂಗಳೂರು ಪೊಲೀಸರು ಆಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಿದರು. ಗೃಹ ಸಚಿವ ಪರಮೇಶ್ವರದ ಅವರ ಆದೇಶದಂತೆಯೇ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ, ವರದಿ ಸಲ್ಲಿಸುವುದಕ್ಕೂ ಮುನ್ನವೇ ಪರಮೇಶ್ವರ್ ಅವರೇ ಆಮ್ನೆಸ್ಟಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಹೈಕಮಾಂಡ್ ಒತ್ತಡದಲ್ಲಿ ಅವರು ಕೆಲಸ ಮಾಡುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತಿದೆ.

ಆಮ್ನೆಸ್ಟಿ ವಿವಾದದಲ್ಲಿ ಸ್ವತಃ ಗೃಹ ಸಚಿವರೇ ಕ್ಲೀನ್ ಚಿಟ್ ನೀಡುವುದರಿಂದ ಪ್ರಕರಣ ಸಂಬಂಧ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಿದೆ. ವಿವಾದವೊಂದು ಗಂಭೀರ ವಿಚಾರವಾಗಿದೆ. ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments