ಮಳೆಗಾಗಿ ಕತ್ತೆಗಳ ಮದುವೆ ಮಾಡಿ ಪ್ರಾರ್ಥಿಸಿದ ಗ್ರಾಮಸ್ಥರು
ಈ ಬಾರಿ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಾನಪದ ಸಂಸ್ಕೃತಿಯಂತೆ ತುಮಕೂರಿನ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ..
ತುಮಕೂರು: ಈ ಬಾರಿ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಾನಪದ ಸಂಪ್ರದಾಯದಂತೆ ತುಮಕೂರಿನ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ನೇರಳೆಕೆರೆ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ.
ಮೂರು ಕತ್ತೆಗಳಿಗೆ ವಿವಾಹ ಮಾಡಿ ಮಳೆಗಾಗಿ ಪ್ರಾರ್ಥಿಸಿದರು.ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಿವಾಹ ಮಾಡಲಾಯಿತು. ಸ್ಥಳೀಯರು ವಾದ್ಯ ನುಡಿಸಿದರು. ನಂತರ ಮದುವೆಗೆ ಆಗಮಿಸಿದವರಿಗೆಲ್ಲಾ ಪ್ರಸಾದ ಹಂಚಲಾಯಿತು. ರೈತರು ಮಳೆಯನ್ನು ನಂಬಿ, ಭತ್ತ, ಅಡಿಕೆ, ರಾಗಿ ಮತ್ತು ಜೋಳ ಬಿತ್ತನೆ ಮಾಡಿದ್ದು, ಮಳೆಯಿಲ್ಲದೇ ಬೆಳೆಗಳು ಒಣಗುತ್ತಿದ್ದು, ಮಳೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.