ಬೆಂಗಳೂರು: ಪಿಜಿ ಗೆ ನುಗ್ಗಿ ಅಪರಿಚಿತನಿಂದ ಐಟಿ ಉದ್ಯೋಗಿ ಮೇಲೆ ಅತ್ಯಾಚಾರ
ಪಿಜಿಯೊಂದಕ್ಕೆ ನುಗ್ಗಿದ ಅಪರಿಚಿತ ವ್ಯಕ್ತಿ ತಮಿಳು ನಾಡು ಮೂಲದ ಐಟಿ ಉದ್ಯೋಗಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪರಪ್ಪನ ..
ಬೆಂಗಳೂರು: ಪಿಜಿಯೊಂದಕ್ಕೆ ನುಗ್ಗಿದ ಅಪರಿಚಿತ ವ್ಯಕ್ತಿ ತಮಿಳು ನಾಡು ಮೂಲದ ಐಟಿ ಉದ್ಯೋಗಿ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಸೋಮವಾರ ಈ ಕೃತ್ಯ ನಡೆದಿದ್ದು, ಮಂಗಳವಾರ ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷ ವಯಸ್ಸಿನ ಸಂತ್ರಸ್ತೆ ಒಂದು ವರ್ಷದಿಂದ ನಗರದ ಖಾಸಗಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಸ್ನೇಹಿತರ ಜೊತೆ ಪಿಜಿಯಲ್ಲಿ ವಾಸಿಸುತ್ತಿದ್ದಳು. ಸೋಮವಾರ ಬೆಳಗ್ಗೆ ಆಕೆಯ ಸ್ನೇಹಿತರು ಕೆಲಸಕ್ಕೆ ಹೋಗಿದ್ದರು, ಆದರೆ ಅನಾರೋಗ್ಯದ ಕಾರಣ ಸಂತ್ರಸ್ತೆ ವಾಪಸ್ ಪಿಜಿಗೆ ಬಂದಿದ್ದಳು.
ಈ ವೇಳೆ ಪಿಜಿಯೊಳಗೆ ನುಗ್ಗಿದ ಅಪರಿಚಿತ ಚಾಕು ತೋರಿಸಿ, ಹೆದರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ.
ಆರೋಪಿ ಕಳ್ಳತನ ಮಾಡಲು ಕಟ್ಟಡದೊಳಗೆ ನುಗ್ಗಿದ್ದಾನೆ. ಆದರೆ ಪಿಜಿ ಕಟ್ಟಡದಲ್ಲಿ ಏನು ಸಿಗದ ಕಾರಣ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.