ಮತಾಂತರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರ 
ರಾಜ್ಯ

ಮಂಗಳೂರು: ಮತಾಂತರದ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಕೆಲ ಸಂಘಟನೆಗಳು ಜನರನ್ನು ಬಲವಂತದಿಂದ ಮತಾಂತರ ಮಾಡುತ್ತಿದ್ದು, ಈ ಕುರಿತಂತೆ ಸರ್ಕಾರ ಸೂಕ್ತ ರೀತಿಯ ತನಿಖೆ ನಡೆಸುವಂತೆ ಆಗ್ರಹಿಸಿ ಸುಳ್ಯಾ ತಾಲೂಕಿನ ಮಂಡೆಕೋಲು ಗ್ರಾಮದ ...

ಮಂಗಳೂರು: ಕೆಲ ಸಂಘಟನೆಗಳು ಜನರನ್ನು ಬಲವಂತದಿಂದ ಮತಾಂತರ ಮಾಡುತ್ತಿದ್ದು, ಈ ಕುರಿತಂತೆ ಸರ್ಕಾರ ಸೂಕ್ತ ರೀತಿಯ ತನಿಖೆ ನಡೆಸುವಂತೆ ಆಗ್ರಹಿಸಿ ಸುಳ್ಯಾ ತಾಲೂಕಿನ ಮಂಡೆಕೋಲು ಗ್ರಾಮದ ಜನರು ಬುಧವಾರ ಪ್ರತಿಭಟನೆ ನಡೆಸಿದರು.

ಕೋಝಿಕೋಡ್ ನಲ್ಲಿನ ಮುಖಂದರ್ ನ ಥೆರ್ಬಿಯಾತುಲ್ ಇಸ್ಲಾಂ ಸಭಾ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಿದ ಮಂಡೆಕೋಲು ಗ್ರಾಮದ ಜನರು, ಇಸ್ಲಾಂ ಸಭಾ ವೇದಿಕೆಯು ಇಲ್ಲಿನ ಯುವಕರನ್ನು ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಭವಿಷ್ಯದಲ್ಲಿ ಮುಂದೆಂದೂ ಈ ರೀತಿ ಆಗದಂತೆ ಪೊಲೀಸರ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮತಾಂತರ ಕುರಿತಂತೆ ಮಾತನಾಡಿರುವ ಕುಟುಂಬವೊಂದು, ನನ್ನ ಮಗ ಸತೀಶ್ ನನ್ನು ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿಕೊಳ್ಳಲಾಗಿತ್ತು. ನಂತರ ಮತ್ತೆ ನಮ್ಮೊಂದಿಗೆ ಇರಲು ನಿರ್ಧರಿಸಿ ಕುಟುಂಬವನ್ನು ಸೇರಿದ್ದ. ಇದೀಗ ಹಿಂದಿದ್ದ ಎಲ್ಲಾ ಸಂಪರ್ಕವನ್ನು ಕಡಿತಗೊಳಿಸಿ ನಮ್ಮೊಂದಿಗೆ ಇರಲು ನಿರ್ಧರಿಸಿದ್ದಾನೆ. ಪ್ರಸ್ತುತ ಬೆಂಗಳೂರಿನಲ್ಲಿರುವ ನಮ್ಮ ಸಂಬಂಧಿಕರೊಬ್ಬರ ಮನೆಯಲ್ಲಿದ್ದಾನೆಂದು ಹೇಳಿಕೊಂಡಿದ್ದಾರೆ. ಆದರೆ, ನಗರದಲ್ಲಿ ಯಾವ ಪ್ರದೇಶದಲ್ಲಿದ್ದಾರೆಂಬ ಮಾಹಿತಿಯನ್ನು ನೀಡಲು ಅವರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!