ಉಡುಪಿ: ದಾಖಲೆ ಇಲ್ಲದೆ 2000 ಮುಖಬೆಲೆಯ 71 ಲಕ್ಷ ರುಪಾಯಿಯನ್ನು ಕಾರಿನಲ್ಲಿ ಸಾಗಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದು ಮೂವರನ್ನು ಬಂಧಿಸಿದ್ದಾರೆ.
ಮಂಗಳೂರು ಮೂಲದ ಇಮ್ರಾನ್, ಆಸೀಫ್ ಮತ್ತು ದೀಪಕ್ ಎಂಬುವರು ತಮ್ಮ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದ್ದು ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣವನ್ನು ಪೊಲೀಸರು ಮಂಗಳೂರು ಆದಾಯ ತೆರಿಗೆ ವಿಭಾಗಕ್ಕೆ ವರ್ಗಾಯಿಸಿದ್ದಾರೆ.
ಇದಕ್ಕೂ ಮುನ್ನ ಗುರುವಾರ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ದಾಳಿ ನಡೆಸಿದ್ದು ಇಬ್ಬರು ಸರ್ಕಾರಿ ಅಧಿಕಾರಿಗಳಿಂದ ಸುಮಾರು 4.7 ಕೋಟಿ ಮೌಲ್ಯದ 2000 ರುಪಾಯಿ ನೋಟುಗಳನ್ನು ಜಪ್ತಿ ಮಾಡಿದ್ದರು.