ರಾಜ್ಯ

82ನೇ ಕನ್ನಡ ಸಾಹಿತ್ಯ ಸಮ್ಮೇಳನ ಧ್ವಜಾರೋಹಣ ಮುಕ್ತಾಯ: ಉದ್ಘಾಟನೆಗೆ ಕ್ಷಣಗಣನೆ

Sumana Upadhyaya
ರಾಯಚೂರು: 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಕನ್ನಡದ ತೇರು ಎಳೆಯಲು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಸಜ್ಜಾಗಿದ್ದಾರೆ.ಇಂದು ಬೆಳಗ್ಗೆ 11 ಗಂಟೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆರಂಭವಾಗುವ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಈಗಾಗಲೇ ಸಮ್ಮೇಳನದ ಪ್ರಧಾನ ವೇದಿಕೆಯ ಮುಂಭಾಗದಲ್ಲಿ ಧ್ವಜಾರೋಹಣ ಮುಕ್ತಾಯಗೊಂಡಿತು. ಇದೀಗ ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಭವ್ಯ ಮೆರವಣಿಗೆ ನಗರದ ಕರ್ನಾಟಕ ಸಂಘದಿಂದ ಆರಂಭಗೊಂಡಿದೆ. 
ಆರು ದಶಕಗಳ ನಂತರ ರಾಯಚೂರಿನಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಹಜವಾಗಿ ಇಲ್ಲಿನ ಸಾಹಿತ್ಯಾಭಿಮಾನಿಗಳಲ್ಲಿ ಸಂತೋಷ, ಉತ್ಸಾಹ ಮೂಡಿಸಿದೆ.1955ರಲ್ಲಿ ಆದ್ಯ ರಂಗಾಚಾರ್ಯರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆದಿತ್ತು.
ಇಂದು ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ, ಸಮ್ಮೇಳನಾಧ್ಯಕ್ಷ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಲಿದ್ದಾರೆ. 
ಇಂದು, ನಾಳೆ, ನಾಡಿದ್ದು ಮೂರು ದಿನಗಳ ಕಾಲ ಕನ್ನಡ ಸಾಹಿತ್ಯದ ಜಾತ್ರೆ ಜರುಗಲಿದೆ.
SCROLL FOR NEXT