ರಾಜ್ಯ

ಪೊಲೀಸರ ನೈತಿಕ ಸ್ಥೈರ್ಯ, ಆತ್ಮ ವಿಶ್ವಾಸ ಹೆಚ್ಚಿಸಲು ಕ್ರಮ: ಜಿ ಪರಮೇಶ್ವರ್

Shilpa D

ಬೆಳಗಾವಿ: ಪೊಲೀಸರಿಗೆ ಕೆಲಸದ ಒತ್ತಡ ಕಡಿಮೆ ಮಾಡಲು ವಾರಕ್ಕೆ ಒಂದು ದಿನ ಕಡ್ಡಾಯ ರಜೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯರಾದ ಅರುಣ ಶಹಾಪುರ ಮತ್ತು ಮಹಂತೇಶ ಕವಟಗಿಮಠ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಪ್ರತಿ ಜಿಲ್ಲಾ ಹಾಗೂ ತಾಲ್ಲೂಕಿನಲ್ಲಿ ಕೌನ್ಸೆಲಿಂಗ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ 25 ಸಾವಿರ ಹುದ್ದೆಗಳು ಖಾಲಿ ಇದ್ದವು. ಇದರಿಂದಾಗಿ ಪೊಲೀಸರ ಮೇಲೆ ಒತ್ತಡ ಹೆಚ್ಚಾಗಿತ್ತು. ಆದರೆ, ಈ ವರ್ಷ 19,500 ಪೊಲೀಸರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಸುಮಾರು 6 ಸಾವಿರ ಸಿಬ್ಬಂದಿ ವಿವಿಧ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇನ್ನೂ 6 ಸಾವಿರ ಸಿಬ್ಬಂದಿ ತರಬೇತಿ ಹಂತದಲ್ಲಿದ್ದಾರೆ ಎಂದರು.

ಕೆಲಸದ ಒತ್ತಡ, ಮೇಲಧಿಕಾರಿಗಳ ಕಿರುಕುಳ ಮತ್ತು ವೈಯಕ್ತಿಕ ಕಾರಣಗಳಿಂದ 2014ರಲ್ಲಿ 11, 2015ರಲ್ಲಿ 21 ಮತ್ತು 2016ರಲ್ಲಿ ಅಕ್ಟೋಬರ್ ವರೆಗೆ 17 ಮಂದಿ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.

SCROLL FOR NEXT