ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದ ಎರಡು ಸಾವಿರ ರುಪಾಯಿ ಮುಖಬೆಲೆಯ 12 ಲಕ್ಷದ 10 ಸಾವಿರ ರುಪಾಯಿ ನಗದನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ಶನಿವಾರ ಜಪ್ತಿ ಮಾಡಿದ್ದಾರೆ.
ಆಲ್ಟೋ ಕಾರಿನಲ್ಲಿ ಆಂಧ್ರಪ್ರದೇಶದ ಅನಂತಪುರಂನಿಂದ ತರಲಾಗಿದ್ದ ಹಣವನ್ನು ಮಹಾದೇವಪುರ ಪೆಟ್ರೋಲ್ ಬಂಕ್ ಬಳಿ ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಈಶ್ವರಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಹಣ ಸಂಬಂಧಿಕರಿಗೆ ಸೇರಿದ್ದು ಎಂದು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ವಿಚಾರಣೆ ಬಳಿಕ ಈಶ್ವರಪ್ಪನನ್ನು ಪೊಲೀಸರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.