ಅತ್ತಿಬೆಲೆ ಚೆಕ್ ಪೋಸ್ಚ್ ನಲ್ಲಿ ಬಿಗಿ ಭದ್ರತೆ (ಸಂಗ್ರಹ ಚಿತ್ರ) 
ರಾಜ್ಯ

ಜಯಾಗೆ ಅನಾರೋಗ್ಯ: ರಾಜ್ಯದಲ್ಲೂ ಕಟ್ಟೆಚ್ಚರ, ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬೆಂಗಳೂರು: ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್  ಬಂದೋಬಸ್ತ್ ಮಾಡಲಾಗಿದೆ.

ಪ್ರಮುಖವಾಗಿ ತಮಿಳುನಾಡು ಗಡಿ ಸಮೀಪದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರಿನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಮುಖವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರಿನ  ಅತ್ತಿಬೆಲೆ ಹಾಗೂ ಅನೇಕಲ್ ನಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಅತ್ತಿಬೆಲೆ ಮತ್ತು ಆನೇಕಲ್ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ.

ನಿನ್ನೆ ರಾತ್ರಿ ರಾಜ್ಯದ ಕೆಎಸ್ ಆರ್ ಟಿಸಿ ಬಸ್ ಮೇಲೆ ತಿರುವಣ್ಣಾಮಲೈನಲ್ಲಿ ದಾಳಿ ನಡೆದ ಬಳಿಕ ರಾಜ್ಯದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬಸ್ ಗಳ ಸಂಚಾರ ಸ್ಥಗಿತವಾಗಿದ್ದು, ತಮಿಳುನಾಡಿನಲ್ಲಿ ಚೆನ್ನೈಗೆ ಸಂಪರ್ಕ ಕಲ್ಪಿಸುವ  ರಸ್ತೆಗಳನ್ನು ಬಹುತೇಕ ಮುಚ್ಚಲಾಗಿದೆ. ಹೀಗಾಗಿ ಅತ್ತಿಬೆಲೆಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದು, ಗೂಡ್ಸ್ ವಾಹನಗಳು ಮತ್ತು ಖಾಸಗಿ ವಾಹನಗಳ ಮಾತ್ರ ವಿರಳ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿವೆ.

ಬೆಂಗಳೂರಿನಲ್ಲೂ ಕಟ್ಟೆಚ್ಚರ
ಅತ್ತ ಜಯಾಗೆ ಹೃದಯಾಘಾತ ವಿಚಾರ ತಿಳಿಯುತ್ತಿದ್ದಂತೆಯ ಚೆನ್ನೈನ ಆಪೋಲೋ ಆಸ್ಪತ್ರೆಯತ್ತ ಅಭಿಮಾನಿಗಳು ಧಾವಿಸುತ್ತಿದ್ದಂತೆಯೇ, ಇತ್ತ ಬೆಂಗಳೂರಿನಲ್ಲೂ ಅವರ ಅಭಿಮಾನಿಗಳು ಕಂಗಾಲಾಗಿದ್ದರೆ. ನಗರ  ಶ್ರೀರಾಂಪುರದಲ್ಲಿರುವ ತಮಿಳು ನಿವಾಸಿಗಳು ಜಯಲಿಲಿತಾ ಚೇತರಿಸಿಕೊಳ್ಳಲಿ ಎಂದು ರಾತ್ರಿಯಿಂದಲೇ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಇನ್ನು ಜಯಲಲಿತಾ ಅವರಿಗೆ ಹೃದಯಾಘಾತವಾದಗ ಹಿನ್ನಲೆಯಲ್ಲಿ ನಗರದಲ್ಲಿ  ತಮಿಳುನಿವಾಗಳು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಮುಖವಾಗಿ ನಗರದ ಶ್ರೀರಾಂಪುರ, ಓಕಳಿಪುರಂ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ತಮಿಳು ನಿವಾಸಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ವ್ಯಾಪಕ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು  ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!