ಕೆಎಸ್ ಆರ್ಟಿಸಿ ರಾಜ ಹಂಸ ಬಸ್ 
ರಾಜ್ಯ

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ:ಸಿವಿಎಲ್ ಎಂಜಿನಿಯರ್ ಸಾವು

ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೋರ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ...

ಬೆಂಗಳೂರು: ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೋರ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ಮರಿಯಪ್ಪನ ಪಾಳ್ಯ ನಿವಾಸಿ  ಕಮಲ್ ಮಣಿ ಮೃತ ದುರ್ದೈವಿ, ಇವರು ತಮ್ಮ ಪತ್ನಿ ಲಾವಣ್ಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ, ಲಾವಣ್ಯ ಅಪಾಯದಿಂದ ಪಾರಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಲಾವಣ್ಯ ಮತ್ತು ಕಮಲ್ ಮಣಿ ಗೆ ವಿವಾಹವಾಗಿತ್ತು. ಕಮಲ್ ಮಣಿ ಬಸವೇಶ್ವರ್ ನಗರಗ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಲಾವಣ್ಯರನ್ನು ರಾಜಾಜಿನಗರದ ಕಚೇರಿಗೆ ಡ್ರಾಪ್ ಮಾಡುವ ವೇಳೆ ಬೆಳಗ್ಗೆ ಸುಮಾರು 9.30 ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಕಮಲ್ ಮಣಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ರಾಜಾಜಿನಗರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!