ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಪ್ರಧಾನಿ ಮೋದಿ ಮಹದಾಯಿ ಚರ್ಚೆಗೆ ಇನ್ನೂ ಸಮಯ ನೀಡಿಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಮಹದಾಯಿ ವಿವಾದ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇನ್ನೂ ತಮಗೆ ಸಮಯವನ್ನೇ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇನ್ನೂ ತಮಗೆ ಸಮಯವನ್ನೇ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ ವಿವಾದ ಪರಿಷ್ಕರಣೆ ಸಂಬಂಧ ಉಭಯ ಸದನಗಳಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಈ ಬಗ್ಗೆ ಚರ್ಚೆ ನಡೆಸಲು  ಪ್ರಧಾನಿ ನರೇಂದ್ರ ಮೋದಿ ಇನ್ನೂ ಸಮಯಾವಕಾಶವನ್ನೇ ನೀಡಿಲ್ಲ. ರಾಜ್ಯದ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲುಪಿಸುವ ಕೆಲಸವನ್ನು ರಾಜ್ಯದ ಬಿಜೆಪಿ ನಾಯಕರು ಮಾಡುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ  ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ಒಕ್ಕೂಟ ವ್ಯವಸ್ಥೆ ಎಂದರೇನು ಎಂದು ತಿಳಿದಿಲ್ಲ ಎನಿಸುತ್ತಿದೆ. ಪ್ರಧಾನಿ ಮೋದಿ ಅವರಿಗೆ ರಾಜ್ಯದ ಸಮಸ್ಯೆಯನ್ನು ತಿಳಿಸುವ ಕಾರ್ಯಕ್ಕೆ ಅವರು ಮುಂದಾಗುತ್ತಿಲ್ಲ ಎಂದು  ಕಿಡಿಕಾರಿದ್ದಾರೆ.

ಮಹದಾಯಿ ವಿವಾದ ಕುರಿತಂತೆ ಚರ್ಚಿಸಲು ನಿನ್ನೆ ಪ್ರಧಾನಿ ಬಳಿ ಸಮಯ ಕೇಳಿದ್ದೆವು. ಆದರೆ ಸಂಸತ್ ಕಲಾಪದ ನೆಪವೊಡ್ಡಿ ಮತ್ತೆ ಸಮಯ ನೀಡಿಲ್ಲ. ಮುಂದಿನ ದಿನಗಳಲ್ಲಿ ಸಮಯ ನೀಡುವುದಾಗಿ ತಿಳಿಸಿದ್ದಾರೆ. ಒಕ್ಕೂಟ  ವ್ಯವಸ್ಥೆಯಲ್ಲಿ ಇದು ಸರಿಯಲ್ಲ. ರಾಜ್ಯಗಳಿಗೆ ನೀಡಬೇಕಾದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ಆಗ ಅಂದಿನ ಪ್ರಧಾನಿಯಾಗಿದ್ದ ಡಾ.ಮನ್‌ಮೋಹನ್‌ ಸಿಂಗ್‌ ಅವರು 1500 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದ್ದರು. ಅದರಲ್ಲಿ ಎಷ್ಟು ಹಣ ಕರ್ಚು ಮಾಡಿದ್ದರು ಎನ್ನುವ ವಿವರವನ್ನೂ ಕೇಳಿರಲಿಲ್ಲ ಎಂದರು. 14ನೇ ಹಣಕಾಸು ಆಯೋಗದ ಅನ್ವಯ ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ