ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೇ 2, 3ರಂದು ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 2017-18ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ...

ಸಾಂದರ್ಭಿಕ ಚಿತ್ರ
Sumana Upadhyaya
Updated On : 13 Dec 2016, 11:07 am
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 2017-18ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 2ರಿಂದ ಮೇ 4ರವರೆಗೆ ಎರಡು ದಿನಗಳ ಕಾಲ ನಡೆಯಲಿದೆ. 
ಮೊದಲ ವರ್ಷ ಅಥವಾ ಮೊದಲನೇ ಸೆಮಿಸ್ಟರ್‌ನ ಇಂಜಿನಿಯರಿಂಗ್‌, ಆಯುರ್ವೇದ, ಹೋಮಿಯೋಪತಿ, ಯುನಾನಿ, ನ್ಯಾಚುರೋಪತಿ, ಯೋಗ, ತಂತ್ರಜ್ಞಾನ, ಕೃಷಿ ವಿಜ್ಞಾನ (ಬಿಎಸ್‌ಸಿ ಅಗ್ರಿ), ಬಿಎಚ್‌ಎಸ್‌ಸಿ, ಬಿ.ಟೆಕ್‌, ಬಿಎಫ್ಎಸ್‌ಸಿ (ಮೀನುಗಾರಿಕೆ), ಬಿ.ಟೆಕ್‌ (ಫ‌ುಡ್‌ ಸೈನ್ಸ್‌), ಬಿ-ಫಾರ್ಮಾ ಹಾಗೂ ಫಾರ್ಮಾ-ಡಿ ಕೋರ್ಸ್‌ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಸಿಇಟಿ ಬರೆಯಲಿದ್ದಾರೆ.
ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಅಭ್ಯರ್ಥಿಗಳು ಸಿಬಿಎಸ್‌ಇ ವತಿಯಿಂದ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (ಎನ್‌ಇಇಟಿ) ಹಾಜರಾಗಬೇಕು. ಇನ್ನು ಆರ್ಕಿಟೆಕ್ಚರ್‌ ಕೋರ್ಸ್‌ ಪ್ರವೇಶಕ್ಕಾಗಿ ಕೌನ್ಸಿಲ್‌ ಆಫ್ ಆರ್ಕಿಟೆಕ್ಚರ್‌ ವತಿಯಿಂದ ನಡೆಸುವ ನಾಟಾ (ನ್ಯಾಷನಲ್‌ ಆಪ್ಟಿಟ್ಯೂಟ್‌ ಟೆಸ್ಟ್‌ ಇನ್‌ ಆರ್ಕಿಟೆಕ್ಚರ್‌) ಪರೀಕ್ಷೆಗೆ ಹಾಜರಾಗಬೇಕು. ಉಳಿದ ಪದವಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ನಡೆಸಲಿದೆ.

Advertisement

Advertisement

ಪರೀಕ್ಷಾ ವೇಳಾಪಟ್ಟಿ: ಮೇ 2, 2017 ಮಂಗಳವಾರ   ಬೆಳಗ್ಗೆ 10.30 ರಿಂದ 11.50 ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ಗಣಿತ, ಮೇ 3, 2017 ಬುಧವಾರ ಬೆಳಗ್ಗೆ 10.30ರಿಂದ 11.50 ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50  ರಸಾಯನಶಾಸ್ತ್ರ, ಕನ್ನಡ ಭಾಷಾ ಪರೀಕ್ಷೆ, ಮೇ 4, 2017 ಗುರುವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರವರೆಗೆ ಹೊರನಾಡು ಮತ್ತು  ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು http://kea.kar.nic.in ಜಾಲತಾಣಕ್ಕೆ ಭೇಟಿ ನೀಡಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments