ಗಾಲಿ ಜನಾರ್ಧನರೆಡ್ಡಿ (ಸಂಗ್ರಹ ಚಿತ್ರ) 
ರಾಜ್ಯ

ಕಪ್ಪು-ಬಿಳಿ ದಂಧೆ; ಗಾಲಿ ಜನಾರ್ಧನ ರೆಡ್ಡಿಗೆ ಸಮನ್ಸ್ ಜಾರಿ ಸಾಧ್ಯತೆ!

ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಗಣಿ ಉಧ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಐಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಚಾಲಕ ರಮೇಶ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಗಣಿ ಉಧ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಸಿಐಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡುವ  ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಜನಾರ್ಧನ ರೆಡ್ಡಿ ತಮ್ಮ ಪುತ್ರಿ ಬ್ರಹ್ಮಿಣಿ ಅವರ ವಿವಾಹಕ್ಕಾಗಿ ಕೋಟಿಗಟ್ಟಲೆ ಕಪ್ಪುಹಣವನ್ನು ಕೆಎಎಸ್ ಅಧಿಕಾರಿ ಭೀಮಾನಾಯಕ್ ಅವರ ಮುಖಾಂತರ ಬಿಳಿಯಾಗಿಸಿಕೊಂಡಿದ್ದರು ಎಂಬ ರಮೇಶ್ ಅವರ ಡೆತ್ ನೋಟ್ ನಲ್ಲಿ  ಅಂಶದ ಮೇರೆಗೆ ಸಿಐಡಿ ಅಧಿಕಾರಿಗಳು ಅವರ ವಿಚಾರಣೆ ಮಾಡಲು ಬಯಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಜನಾರ್ಧನ ರೆಡ್ಡಿ ಅವರಿಗೆ ಸಿಐಡಿ ಅಧಿಕಾರಿಗಳು ಸಮನ್ಸ್ ಜಾರಿಮಾಡಲು ಮುಂದಾಗಿದ್ದಾರೆ ಎಂದು  ತಿಳಿದುಬಂದಿದೆ.

ನಿನ್ನೆಯಷ್ಟೇ ಬಂಧಿತ ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರು ಜನಾರ್ಧನ ರೆಡ್ಡಿ ಅವರ ಕಪ್ಪುಹಣ ಬಿಳಿಯಾಗಿಸಲು ನೆರವು ನೀಡಿದ್ದೆ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಇದೇ ಅಂಶವನ್ನು ಚಾಲಕ ರಮೇಶ್ ತನ್ನ ಡೆತ್  ನೋಟ್ ನಲ್ಲಿ ನಮೂದಿಸಿದ್ದ. ಈ ಅಂಶಗಳ ಆಧಾರದ ಮೇಲೆ ಜನಾರ್ಧನ ರೆಡ್ಡಿ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಲು ಮುಂದಾಗಿದ್ದಾರೆ ಮತ್ತು ಜನಾರ್ಧನ ರೆಡ್ಡಿ ಅವರಿಗೆ ಸಮನ್ಸ್ ಜಾರಿಗೆ ಮುಂದಾಗಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಿಐಡಿ ಅಧಿಕಾರಿಯೊಬ್ಬರು ಕೇವಲ ಜನಾರ್ಧರೆಡ್ಡಿ ಅವರನ್ನು ಮಾತ್ರವಲ್ಲದೇ ಕೆಲ ಬ್ಯಾಂಕ್ ಅಧಿಕಾರಿಗಳನ್ನೂ ಕೂಡ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದೇವೆ. ತಮಗೆ  ದೊರೆತ ಮಾಹಿತಿಗಳ ಪ್ರಕಾರ ಸುಮಾರು 100ಕೋಟಿಗೂ ಅಧಿಕ ಕಪ್ಪುಹಣವನ್ನು ಬಿಳಿಯಾಗಿಸಲು ಕೆಎಎಸ್ ಅಧಿಕಾರಿ ಹಾಗೂ ಕೆಲ ಬ್ಯಾಂಕ್ ಅಧಿಕಾರಿಗಳು ನೆರವು ನೀಡಿರುವ ಸಾಧ್ಯತೆಗಳಿವೆ. ಹೀಗಾಗಿ ಈ ಬಗ್ಗೆ  ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!