ಐಟಿ ದಾಳಿ ವೇಳೆ ಪತ್ತೆಯಾದ ನಗದು - ಎಸ್ ಸಿ ಜಯಚಂದ್ರ 
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಎಸ್ ಸಿ ಜಯಚಂದ್ರಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಭಾರೀ ಪ್ರಮಾಣ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರಗೆ ಗುರುವಾರ ಸಿಟಿ ಸಿವಿಲ್ ಕೋರ್ಟ್ ...

ಬೆಂಗಳೂರು: ಭಾರೀ ಪ್ರಮಾಣ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರಗೆ ಗುರುವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಷರತ್ತುಗಳನ್ನು ಪೂರ್ಣಗೊಳಿಸದ ಕಾರಣ ಅವರನ್ನು ಒಂದು ದಿನದ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಎಸ್‌.ಸಿ. ಜಯಚಂದ್ರ ವಿರುದ್ಧ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಎಸಿಬಿ ತನಿಖಾ ಸಂಸ್ಥೆಗಳು ಪ್ರಕರಣ ದಾಖಲಿಸಿದ್ದವು. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಇಂದು ಸಿಬಿಐನ ವಿಶೇಷ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತು. ನಾಳೆ ಷರತ್ತುಗಳನ್ನು ಪೂರೈಸಿ ಜಾಮೀನು ಪಡೆದರೆ, ಅವರನ್ನು ಸಿಬಿಐ ಬಂಧಿಸಲಿದೆ ಎಂದು ಮೂಲಗಳು ತಿಳಿಸಿವೆ.

ಜಯಚಂದ್ರ ಅವರಿಗೆ ಜಾಮೀನು ದೊರೆತ ಬಳಿಕ, ಷರತ್ತಿನ ಅನ್ವಯ ಪಾಸ್‌ಪೋರ್ಟ್ಅನ್ನು ನ್ಯಾಯಾಲಯದ ವಶಕ್ಕೆ ನೀಡಲು ವಿಫಲರಾದ ಕಾರಣ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಜಯಚಂದ್ರಗೆ ಜಾಮೀನು ದೊರೆತರೂ ಬಿಡುಗಡೆಯಾಗಲಿಲ್ಲ. ಇನ್ನು ಎಸಿಬಿ ಕೂಡ ಜಯಚಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ.

ಜಯಚಂದ್ರ ಮನೆ ಮೇಲೆ ಸಿಬಿಐ, ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾಗ ಕೋಟಿ, ಕೋಟಿ ಹೊಸ ನೋಟು, ಚಿನ್ನದ ಗಟ್ಟಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT