ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ಶಾಲೆಯಲ್ಲಿ ಎಲ್ ಕೆಜಿ ಮಗು ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಾವರದ ಶಾಲೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಐದು ವರ್ಷದ...

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಾವರದ ಶಾಲೆಯ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪ ಕೇಳಿಬಂದಿದೆ. 
ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಕೆಜಿ ಹಳ್ಳಿ ಠಾಣೆಯ ಪೊಲೀಸರು ಪೋಸ್ಕೊ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡಿದ್ದು, ಸೋಮವಾರ ಮಧ್ಯಾಹ್ನ ಎಲ್ ಕೆಜಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಶಾಲೆಯಿಂದ ಮನೆಗೆ ಹೋದ ನಂತರ ಬಾಲಿಕ ತನ್ನ ಖಾಸಗಿ ಭಾಗದಲ್ಲಿ ನೋವು ಕಾಣಿಸಿಕೊಂಡಿರುವುದನ್ನು ಪೋಷಕರಿಗೆ ತಿಳಿಸಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಪಾಸಣೆಯ ನಂತರ ವೈದ್ಯರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ಈ ಬಗ್ಗೆ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸಿರುವ ಶಾಲಾ ಸಿಬ್ಬಂದಿ, ಶಾಲಾ ಆವರಣದಲ್ಲಿ ಅಂತಹ ಘಟನೆ ನಡೆದಿರುವ ಬಗ್ಗೆ ಸಿಸಿಟಿವಿ ದೃಶ್ಯ ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಶಾಲಾ ಅಭಿವೃದ್ಧಿಯನ್ನು ಸಹಿಸಿಕೊಳ್ಳದ ಕೆಲವರು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಿರುವ ಶಾಲಾ ಸಿಬ್ಬಂದಿ, ಎಲ್ಲಾ ವಿವವರನ್ನು ಪೊಲೀಸರಿಗೆ ನೀಡಿದ್ದು, ಅವರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT