ಸಿದ್ದರಾಮಯ್ಯ 
ರಾಜ್ಯ

ದಿಡ್ಡಳ್ಳಿ ಆದಿವಾಸಿಗಳಿಗೆ ಶೀಘ್ರವೇ ಪುನರ್ವಸತಿ: ಸಿಎಂ ಸಿದ್ದರಾಮಯ್ಯ ಭರವಸೆ

ಅರಣ್ಯ ತೆರವು ಕಾರ್ಯಾಚರಣೆಯಿಂದ ಆಶ್ರಯ ಕಳೆದುಕೊಂಡು ಬೀದಿಗೆ ಬಿದ್ದಿರುವ ಮಡಿಕೇರಿಯ ದಿಡ್ಡಳ್ಳಿಗೆ ತೆರಲಿ ಅವರ ಸಮಸ್ಯೆಗಳನ್ನು ಆಲಿಸುವಂತೆ ...

ಶಿವಮೊಗ್ಗ: ಅರಣ್ಯ ತೆರವು ಕಾರ್ಯಾಚರಣೆಯಿಂದ ಆಶ್ರಯ ಕಳೆದುಕೊಂಡು ಬೀದಿಗೆ ಬಿದ್ದಿರುವ ಮಡಿಕೇರಿಯ ದಿಡ್ಡಳ್ಳಿಗೆ  ತೆರಲಿ ಅವರ ಸಮಸ್ಯೆಗಳನ್ನು ಆಲಿಸುವಂತೆ ಸಚಿವ ಆಂಜನೇಯಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಡಿಸೆಂಬರ್ 7 ರಂದು ನಡೆದ ಅರಣ್ಯ ತೆರವು ಕಾರ್ಯಾಚರಣೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಸೂರು ಕಳೆದು ಕೊಂಡು ಬೀದಿಗೆ ಬಿದ್ದಿವೆ. ದಿಡ್ಡಳ್ಳಿ ಮತ್ತು ದೇವಮಾಚ್ಚಿ ಪ್ರದೇಶಗಳು ನಾಗರಹೊಳೆ ಹುಲಿ ರಕ್ಷಿತಾರಣ್ಯದ ಅಡಿಯಲ್ಲಿ ಬರುತ್ತವೆ. 1891 ರಲ್ಲಿ ಈ ಪ್ರದೇಶವನ್ನು ಕೂರ್ಗ್ ಕಮಿಷನ್ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಿತು.

ಈ ಸಂಬಂಧ ಚಿತ್ರನಟ ಚೇತನ್‌ ನೇತೃತ್ವದ ನಿಯೋಗ ಮಂಗಳಾವರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆದಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವಮಂತೆ ಮನವಿ ಮಾಡಿದರು, ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲೇ ಇದ್ದ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರಿಗೆ ಮರುವಸತಿ ಕಲ್ಪಿಸಲು ಸೂಚಿಸಿದರು.

ಈಗ ಬಯಲು ಪ್ರದೇಶದಲ್ಲಿ ವಾಸ ಮಾಡುತ್ತಿರುವ ಆದಿವಾಸಿ ಕುಟುಂಬಗಳಿಗೆ ತಾತ್ಕಾಲಿಕ ಶೆಡ್‌ಗಳ ನಿರ್ಮಾಣ, ಆಹಾರ, ನೀರು ಸೇರಿದಂತೆ ಇತರ ಅಗತ್ಯ ಸೌಕರ್ಯಗಳನ್ನು ಒದಗಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಆದಿವಾಸಿ ಕುಟುಂಬಗಳಿಗೆ ಮರುವಸತಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಡಿ.24ರಂದು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆದಿವಾಸಿ ಮುಖಂಡರ ಸಭೆ ಕರೆಯುವುದಾಗಿ ಸಚಿವ ಆಂಜನೇಯ ನಿಯೋಗಕ್ಕೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT