ಸಾಂದರ್ಭಿಕ ಚಿತ್ರ 
ರಾಜ್ಯ

ಕನ್ನಡದಲ್ಲಿ ನೀಟ್ ಪರೀಕ್ಷೆಯನ್ನು ಕರ್ನಾಟಕ ಸರ್ಕಾರವೇ ಕೇಳಿಲ್ಲ: ಕೇಂದ್ರ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ...

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಬರೆಯುವ ಅವಕಾಶವನ್ನು ನೀಡಿಲ್ಲ ಎಂದು ಈಗ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ  ಬರೆದಿದ್ದು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಬರೆಯಲು ಅವಕಾಶ ಕೇಳುತ್ತಿದೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರದ ಬಳಿ ಅಭಿಪ್ರಾಯ ಕೇಳಿದ್ದಾಗ ಸುಮ್ಮನೆ ಕುಳಿತಿತ್ತು.
ಕನ್ನಡ ಭಾಷೆಯಲ್ಲಿ ನೀಟ್ ಪರೀಕ್ಷೆ ಬರೆಯಲು ಆಯ್ಕೆ ನೀಡದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈ ಕುರಿತು ಪ್ರತಿಭಟನೆ ಪತ್ರವನ್ನು ಕೇಂದ್ರಕ್ಕೆ ಬರೆಯಲಾಗುವುದು ಎಂದು ಹೇಳಿದ್ದರು. 
ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಸ್ಥಳೀಯ ಭಾಷೆಗಳನ್ನು 2017ರ ನೀಟ್ ಪರೀಕ್ಷೆಯಲ್ಲಿ ಸೇರಿಸುವ ಬಗ್ಗೆ ನಾವು ಎಲ್ಲಾ ರಾಜ್ಯ ಸರ್ಕಾರಗಳ  ಅಭಿಪ್ರಾಯವನ್ನು ಕೇಳಿದ್ದೆವು. ಕೆಲವು ರಾಜ್ಯ ಸರ್ಕಾರಗಳು ಉತ್ತರ ನೀಡಿರಲಿಲ್ಲ, ಅವುಗಳಲ್ಲಿ ಕರ್ನಾಟಕ ಕೂಡ ಒಂದು ಎನ್ನುತ್ತಾರೆ. ಎಲ್ಲಾ ರಾಜ್ಯ ಸರ್ಕಾರಗಳ ಕಾರ್ಯದರ್ಶಿಗಳು, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಹ ಡಿಸೆಂಬರ್ ಮೊದಲ ವಾರದಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ ನಲ್ಲಿ ಅಭಿಪ್ರಾಯ ನೀಡುವಂತೆ ಹೇಳಲಾಗಿತ್ತು. ಅವರು ಉತ್ತರ ನೀಡಲು ಇನ್ನಷ್ಟು ಸಮಯ ಕೇಳಿದ್ದಾರೆ ಎಂದರು.
ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಕೂಡ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು ಎಂದು ಹೇಳುವ ಮುನ್ನ ಕರ್ನಾಟಕ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆ ಬಗ್ಗೆ ಯೋಚಿಸಬೇಕು. ಈ ವರ್ಷದವರೆಗೆ ಸಿಇಟಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ