ನಟ ಚೇತನ್ 
ರಾಜ್ಯ

ಬುಡಕಟ್ಟು ಜನಾಂಗದವರಿಗೆ ಸರ್ಕಾರದ ಬೆಂಬಲವಿಲ್ಲ: ನಟ ಚೇತನ್

ಮಡಿಕೇರಿಯ ದಿಡ್ಡಳ್ಳಿಯಲ್ಲಿ ಬುಡಕಟ್ಟು ಜನಾಂಗದವರನ್ನು ಉಚ್ಛಾಟಿಸಿರುವುದನ್ನು ಮುಖ್ಯಮಂತ್ರಿ...

ಮಂಗಳೂರು: ಮಡಿಕೇರಿಯ ದಿಡ್ಡಳ್ಳಿಯಲ್ಲಿ ಬುಡಕಟ್ಟು ಜನಾಂಗದವರನ್ನು ಉಚ್ಛಾಟಿಸಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಸಲಿಲ್ಲ ಎಂದು ಕನ್ನಡ ಚಿತ್ರ ನಟ ಚೇತನ್ ಆರೋಪಿಸಿದ್ದಾರೆ.
ನಿನ್ನೆ ಮಂಗಳೂರು ಸಮೀಪ ಬಿಜ್ಜೋಡಿಯಲ್ಲಿ ಮಾತನಾಡಿದ ಅವರು,  ನಿಷೇಧಾತ್ಮಕ ಆದೇಶ ವಿಧಿಸುವ ಮೂಲಕ ರಾಜ್ಯ ಸರ್ಕಾರ ಪ್ರತಿಭಟನಾಕಾರರ ಪ್ರಯತ್ನಗಳನ್ನು ತಡೆಹಿಡಿಯುತ್ತಿದೆ ಎಂದು ಆರೋಪಿಸಿದರು.
ಬುಡಕಟ್ಟು ಜನಾಂಗದವರ ಪ್ರತಿಭಟನೆ ಸಾಂವಿಧಾನಿಕ ಹಕ್ಕುಗಳನ್ನು ಎಂದಿಗೂ ಮೀರಿ ಹೋಗಿಲ್ಲ. ಸರ್ಕಾರದ ಎಲ್ಲಾ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ನಿಷೇಧ ಆದೇಶವನ್ನು ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದರು.
ಮಾನವೀಯತೆಯಿಲ್ಲದೆ ಬದುಕುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಳಮಟ್ಟದಲ್ಲಿರುವ ಬುಡಕಟ್ಟು ಜನಾಂಗದವರಿಗೆ ನ್ಯಾಯ ಸಿಗಬೇಕಿದೆ. ತುಳಿತಕ್ಕೊಳಗಾಗಿರುವ ಸಮುದಾಯದ ಮತ್ತು ಬುಡಕಟ್ಟು ಜನಾಂಗದವರ ಅಭಿವೃದ್ಧಿ ಸರ್ಕಾರದ ಮುಖ್ಯ ಅಜೆಂಡವಾಗಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel