ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾರುತಿ ಒಮ್ನಿ-ಇನ್ನೋವಾ ಡಿಕ್ಕಿ, ಒಂದೇ ಕುಟುಂಬದ ಮೂವರ ಸಾವು

ಮಾರುತಿ ಒಮ್ನಿ ಮತ್ತು ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಐವರು ಗಾಯಗೊಂಡಿರುವ ...

ಬೆಂಗಳೂರು: ಮಾರುತಿ ಒಮ್ನಿ ಮತ್ತು ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಾಗಡಿ ತಾಲೂಕಿನ ತಾಲಕೆರೆ ಹ್ಯಾಂಡ್ ಪೊಸ್ಟ್ ಬಳಿ ಸಂಭವಿಸಿದೆ.

ಸಾವನ ದುರ್ಗದಲ್ಲಿ ಬ್ರಹ್ಮೋಪದೇಶ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಉಪನಯನ ಮಾಡಿಸಿಕೊಂಡ  ಬಾಲಕ ಕೂಡ ಸಾವನ್ನಪ್ಪಿದ್ದಾನೆ. ಪ್ರೇಮಬಾಯಿ, ಸುಹಾಸ್, ಮತ್ತು ಸನ್ನಿಧಿ ಮೃತ ದುರ್ದೈವಿಗಳು.

ಶಿವಮೊಗ್ಗದ ಭದ್ರಾವತಿ ಜಿಲ್ಲೆಯವರಾದ ಉಮೇಶ್ವರ್ ಮತ್ತು ಸುಜಾತಾಬಾಯಿ ಅವರ ಪುತ್ರ ಸುಹಾಸ್, ಪರಮೇಶ್ವರ್ ಮತ್ತು ಮಧುರಾಬಾಯಿ ದಂಪತಿ ಮಗಳಾದ ಸನ್ನಿಧಿ ಸಾವನ್ನಪ್ಪಿದ್ದಾರೆ.

ಸಾವನದುರ್ಗದ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಉಪನಯನ ಕಾರ್ಯಕ್ರಮಕ್ಕಾಗಿ ತೆರಳುವ ವೇಳೆ ನಿನ್ನೆ ಸಂಜೆ ಸುಮಾರು 6.30 ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಮಾರುತಿ ಒಮ್ನಿ ಕಾರಿನಲ್ಲಿ ಶಿವಮೊಗ್ಗದಿಂದ ಈ ಕುಟುಂಬ ಹೊರಟಿತ್ತು. ಪರಮೇಶ್ವರ್ ಕಾರು ಡ್ರೈವಿಂಗ್ ಮಾಡುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಇನ್ನೋವಾ ಕಾರಿಗೆ ಡಿಕ್ಕಿ ಮಾರುತಿ ಓಮ್ನಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಗಾಯಗೊಂಡವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!