ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ 
ರಾಜ್ಯ

ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆ ಸೇರಿಸಲು ನಾವು ಸಿದ್ಧ: ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಕನ್ನಡ ಭಾಷೆಯಲ್ಲೂ ಬರೆಯುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ರಾಜ್ಯ ಸರ್ಕಾರವು ...

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಕನ್ನಡ ಭಾಷೆಯಲ್ಲೂ ಬರೆಯುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ರಾಜ್ಯ ಸರ್ಕಾರವು ಕ್ರಮಬದ್ಧವಾಗಿ ಪ್ರಸ್ತಾವ ಸಲ್ಲಿಸಿದರೆ ಪರಿಗಣಿಸುತ್ತೇವೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.

ನಿಮ್ಹಾನ್ಸ್ ನಲ್ಲಿ ಏರ್ಪಡಿಸಿದ್ದ 21 ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಈ ಮೊದಲು ಇಂಗ್ಲೀಷ್ ನಲ್ಲೇ ನೀಟ್ ಪರೀಕ್ಷೆ ಬರೆಯುವಂತೆ ಕರ್ನಾಟಕ ಸರ್ಕಾರ ಸಲಹೆ ನೀಡಿತ್ತು. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಜನರಿಂದ ವಿರೋಧ ವ್ಯಕ್ತವಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗಲೂ ಕಾಲ ಮಿಂಚಿಲ್ಲ. ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡು ಪ್ರಸ್ತಾವನೆ ಸಲ್ಲಿಸಲಿ’ಎಂದರು.

ಆಯಾಯಾ ಪ್ರಾದೇಶಿಕ ಭಾಷೆಗಳಲ್ಲಿ ಎನ್‌ಇಇಟಿ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಹಾಗೂ ಸೀಟು ಹಂಚಿಕೆ ವೇಳೆ ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಅಭಿಪ್ರಾಯ ಕೇಳಿದ್ದೆವು. ಈ ಕುರಿತು ವಿಡಿಯೊ ಸಂವಾದ ಹಮ್ಮಿಕೊಂಡಾಗಲೂ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಕೋರಿರಲಿಲ್ಲ ಆದರೆ ಈಗ ರಾಜ್ಯ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಂಡಿದೆ ಎಂದು ಅವರು ಹೇಳಿದರು.

ಕನ್ನಡದಲ್ಲಿ ನೀಟ್ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ರಾಜ್ಯ ಸಂಸ್ಕೃತಿ ಸಚಿವೆ ಉಮಾಶ್ರೀ ಪ್ರಧಾನಿ ನರೇಂದ್ರಮ ಮೋದಿ ಮತ್ತು ಮುಖ್ಯಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ನೀಟ್ ಪರೀಕ್ಷೆಯನ್ನ ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಡುವಂತೆ ಕೋರಿದ್ದರು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 2017ರಲ್ಲಿ ನಡೆಯುವ ಸಾಮಾನ್ಯ  ಪ್ರವೇಶ  ಪರೀಕ್ಷೆಯನ್ನು (ಸಿಇಟಿ) ಕನ್ನಡದಲ್ಲಿ  ಬರೆಯಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನೂ (ಎನ್‌ಇಇಟಿ)  ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದ ವಿದ್ಯಾರ್ಥಿಗಳು ಕನ್ನಡದಲ್ಲಿ ‘ನೀಟ್‌’  ಪರೀಕ್ಷೆ ಬರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ  ಸಿಬಿಎಸ್‌ಸಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!