ಸಿದ್ದರಾಮಯ್ಯ 
ರಾಜ್ಯ

ಸಿಎಂ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ: ಮಾಧ್ಯಮ ಸಲಹೆಗಾರರಿಂದ ದೂರು ದಾಖಲು

ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು ದೂರು ...

ಬೆಂಗಳೂರು: ಸಿಎಂ  ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು ದೂರು ದಾಖಲಿಸಿದ್ದಾರೆ.

ಈ ಸಂಬಂಧ ಸಿಎಂ ಮಾಧ್ಯಮ ಸಲಹೆಗಾರ ದಿನೇಶ್‌ ಅಮೀನ್‌ಮಟ್ಟು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಎಂ ಹೆಸರಲ್ಲಿ ನಕಲಿ ಟ್ವಿಟರ್‌ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಿಐಡಿಯ ಸೈಬರ್ ವಿಭಾಗಕ್ಕೆ ದೂರು ಸಲ್ಲಿಸಲಾಗಿದೆ.

ಟ್ವಿಟರ್‌ನಲ್ಲಿ CMofKarnataka ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೊಂದಲಕಾರಿ ಟ್ವೀಟ್ ಮಾಡುತ್ತಿದ್ದರು. ಆದರೆ  ಆ ಖಾತೆ ಡಿಆ್ಯಕ್ಟಿವೇಟ್ ಆಗಿತ್ತು. ಆದರೆ ಈಗ ಮತ್ತೆ ಅದೇ ಖಾತೆಯಿಂದ ಗೊಂದಲಕಾರಿ ಹಾಗೂ ಅವಹೇಳನಕಾರಿಯಾದ ಸಂದೇಶಗಳು ಬರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಮ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!