ಬೆಂಗಳೂರು: ಹಸಿವಿನಿಂದ ಇರುವ ಮಗುವಿಗೆ ಆಹಾರ ನೀಡುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದಂತೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಅದಮ್ಯ ಚೇತನ ಸೇವಾ ಉತ್ಸವ-2017, ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅದಮ್ಯ ಚೇತನ ಟ್ರಸ್ಟ್ ನಿಂದ ಕರ್ನಾಟಕ ಹಾಗೂ ರಾಜಸ್ತಾನದಲ್ಲಿ ಸುಮಾರು ಮಧ್ಯಾಹ್ನದ ಬಿಸಿಯೂಟ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಕ್ಕಳನ್ನು ಪೋಷಿಸುವುದೆಂದರೆ ಅದು ಮುಂದಿನ ಪೀಳಿಗೆಯನ್ನು ಪೋಷಿಸಿದಂತೆ ಮುಂದಿನ ಪೀಳಿಗೆ ಆರೋಗ್ಯವಂತ, ವಿದ್ಯಾವಂತ, ಶಕ್ತಿವಂತರಾಗಿ ಬೆಳೆದರೆ ರಾಷ್ಟ್ರವೂ ಸದೃಢವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿಗಳು, ಕ್ಯಾನ್ಸರ್ ಭೀತಿಗೊಳಿಸುವ ರೋಗವಾಗಿದೆ. ಕ್ಯಾನ್ಸರ್ ನ್ನು ಗುಣಪಡಿಸಲು ಜಾಗತಿಕ ಮಟ್ಟದಲ್ಲಿ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಆದರೆ ಈ ವರೆಗೂ ಪರಿಣಾಮಕಾರಿ ಪರಿಹಾರ ಕಂಡುಬಂದಿಲ್ಲ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಿದ ರಾಜ್ಯಪಾಲರು: ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ವಜುಭಾಯ್ ವಾಲ, ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅತ್ಯಂತ ಕಡಿಮೆ ದರದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅದಮ್ಯ ಚೇತನ ಸೇವಾ ಉತ್ಸವ-2017, ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಕೆಆರ್ ರಮೇಶ್ ಕುಮಾರ್, ಕೇಂದ್ರ ಸಚಿವ ಅನಂತ್ ಕುಮಾರ್, ಅದಮ್ಯ ಚೇತನ ಫೌಂಡೇಷನ್ ನ ಅದಮ್ಯ ಚೇತನ ಸ೦ಸ್ಥೆಯ ಅಧ್ಯಕ್ಷರಾದ ತೇಜಸ್ವಿನಿ ಅನಂತ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics